ವರದಿ : ಮಿಯಾಲಾಲ ಕಿಲ್ಲೇದಾರ
ಬೆಳಗಾವಿ :–
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಬೆಳಗಾವಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ : ಪ್ರಥಮ ಪಿಯುಸಿ ಪಿ.ಸಿ.ಎಂ.ಬಿ ವಿಜ್ಞಾನ ಹಾಗೂ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಬೆಳಗಾವಿ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಉನ್ನತೀಕರಣಗೊಂಡ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ರಾಮತಿರ್ಥ ನಗರ ಬೆಳಗಾವಿ,(7406516596), ಮೂಡಲಗಿ(7411226806) ಹಾಗೂ ಎ ಪಿ ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹೂಲಿಕಟ್ಟಿ(7026223373) ಇಲ್ಲಿ ಪ್ರಥಮ ಪಿಯುಸಿ ಪಿ.ಸಿ.ಎಂ.ಬಿ ವಿಜ್ಞಾನ ವಿಭಾಗಕ್ಕೆ ಹಾಗೂ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗಕ್ಕೆ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಜುಲೈ 31, 2023ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು
ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯ ಮೌಲಾನಾ ಆಝಾದ ಅಲ್ಪಸಂಖ್ಯಾತರ ಭವನ, ಕೆ ಎಸ್ ಸಿ ಎ ಕ್ರಿಕೇಟ್ ಕ್ರೀಡಾಂಗಣ ಎದುರುಗಡೆ ರಾಮತಿರ್ಥ ನಗರ ಬೆಳಗಾವಿ. ಇವರ ಕಾರ್ಯಾಲಯವನ್ನು ಹಾಗೂ ದೂರವಾಣಿ 0831-2950349 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.