ವರದಿ : ಮಿಯಾಲಾಲ ಕಿಲ್ಲೇದಾರ
ಚಿಕ್ಕೋಡಿ :–
ಪಟ್ಟಣದ ಹೊಸಪೇಠ ಗಲ್ಲಿಯ ಮುಜರಾಯಿ ಇಲಾಖೆ ವತಿಯಿಂದ ಮಂಜೂರಾಗಿದ್ದ 10 ಲಕ್ಷ ರೂಪಾಯಿ ಮೊತ್ತದಲ್ಲಿ ನಿರ್ಮಾಣವಾಗಿರುವ ಶ್ರೀ ಹನುಮಾನ ಮಂದಿರದ ಮೂರ್ತಿ ಪ್ರಾಣ ಪ್ರತಿಷ್ಠಾಪಣೆ, ಹಾಗೂ ನೂತನ ಶನಿದೇವರ ಮೂರ್ತಿ ಪ್ರತಿಷ್ಠಾಪಣೆ, ವಾಸ್ತುಶಾಂತಿ,ಕಳಸಾರೋಹಣ ಕಾರ್ಯಕ್ರಮದಲ್ಲಿ ಚಿಕ್ಕೋಡಿ ಚರಮೂರ್ತಿ ಮಠದ ಶ್ರೀ ಮ.ನಿ. ಪ್ರ.ಸಂಪಾದನಾ ಮಹಾಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಜಿ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭಾಗವಹಿಸಿ, ಮಾತನಾಡಿದರು. ಇದಕ್ಕೂ ಮೊದಲು ದೇವರು ದರ್ಶನ ಪಡೆದು ಸರ್ವರಿಗೂ ಒಳಿತನ್ನು ಮಾಡಲಿ ಎಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಶ್ರೀ ಪ್ರವೀಣ ಕಾಂಬಳೆ, ಶ್ರೀ ಸಂಜಯ ಕವಟಗಿಮಠ, ಶ್ರೀ ಸಿದ್ದಪ್ಪ ಡೋಂಗಿ, ಚಿಕ್ಕೋಡಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಸೌ.ಶಾಂಭವಿ ಅಶ್ವತಪುರ, ಸೌ.ಶಕುಂತಲಾ ಡೋಣವಾಡೆ ದೇವಸ್ಥಾನ ಕಮೀಟಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.