BEWARE..! OWNERS OF ILLEGAL BUILDINGS… ಅಕ್ಟೋಬರ್ 26 ರಿಂದಲೇ ನಿರ್ಮಾಣ ಹಂತದ ಅಕ್ರಮ ಕಟ್ಟಡಗಳ ಸರ್ವೆ…1712 ಒತ್ತುವರಿ ಕಟ್ಟಡಗಳಿಗೆ ಕಾದಿದೆ ಡೆಮಾಲಿಷನ್ ಭೀತಿ..
ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಅಕ್ರಮ ಕಟ್ಟಡಗಳನ್ನು ನಿರ್ಮಿಸುತ್ತಿರುವವರಿಗೆ ಬಿಬಿಎಂಪಿ ಕೊನೆಯ ವಾರ್ನಿಂಗ್ ನೀಡಿದೆ.ಎಚ್ಚರಿಕೆ ಹೊರತಾಗಿಯೂ ಅಕ್ರಮ ಕಟ್ಟಡ ನಿರ್ಮಿಸುವುದನ್ನು ಮುಂದುವರೆ ಸಿದರೆ ಪರಿಣಾಮ ನೆಟ್ಟಗಿರೊಲ್ಲ ಎನ್ನುವ ಎಚ್ಚರಿಕೆಯನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ ಗಿರಿನಾಥ್ ನೀಡಿದ್ದಾರೆ.ಅಕ್ರಮ ಕಟ್ಟಡಗಳ ಸರ್ವೆಯನ್ನು ಸೋಮವಾರದಿಂದಲೇ ಆರಂಭಿಸಲಾಗುತ್ತಿದ್ದು ಸರ್ವೆ ವೇಳೆ ಕಂಡುಬರುವ ಉಲ್ಲಂಘನೆಗಳನ್ನು ನಿರ್ದಾಕ್ಷಿಣ್ಯವಾಗಿ ಶಿಕ್ಷಿಸುವ ಕೆಲಸ ಮಾಡುವುದಾಗಿ ತುಷಾರ ಗಿರಿನಾಥ್ ಸ್ಪಷ್ಟಪಡಿಸಿದ್ದಾರೆ. ಬಾಬುಸಾಬ್ ಪಾಳ್ಯದ ಕಟ್ಟಡ ದುರಂತ ಬರೋಬ್ಬರಿ ಒಂಬತ್ತು ಅಮಾಯಕ-ನಿಷ್ಪಾಪಿ ಕಾರ್ಮಿಕರ ಜೀವಗಳನ್ನು ಬಲಿತೆಗೆದುಕೊಂಡ ಮೇಲೆ ಬಿಬಿಎಂಪಿ ಗಾಢ ನಿದ್ರೆಯಿಂದ […]
ಕಟ್ಟಡ ಕುಸಿತ ದುರಂತದಲ್ಲಿ ಮೃತರ ಸಂಖ್ಯೆ 6ಕ್ಕೆ ಏರಿಕೆ; ಮಾಲೀಕ, ಗುತ್ತಿಗೆದಾರ ಅರೆಸ್ಟ್
ಭಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದ ಪರಿಣಾಮ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದ್ದು, ಅಕ್ರಮವಾಗಿ ಕಟ್ಟಡ ನಿರ್ಮಿಸುತ್ತಿದ್ದ ಮಾಲೀಕನನ್ನು ಬಂಧಿಸಲಾಗಿದೆ. ಹೆಣ್ಣೂರು ಬಳಿಯ ಹೊರಮಾವು ಅಗ್ರಹಾರ ಸಮೀಪದ ಬಾಬಾ ಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ 6 ಅಂತಸ್ತಿನ ಕಟ್ಟಡ ಮಂಗಳವಾರ ಮಧ್ಯಾಹ್ನ ಕುಸಿದುಬಿದ್ದಿದ್ದು, 5 ಮಂದಿ ಮೃತಪಟ್ಟಿದ್ದು, 5 ಮಂದಿ ಗಾಯಗೊಂಡಿದ್ದಾರೆ. 15 ಮಂದಿಯನ್ನು ರಕ್ಷಿಸಲಾಗಿದೆ. ಭುವನ್ ರೆಡ್ಡಿ ಬಂಧಿತ ವ್ಯಕ್ತಿ. ಅವಘಡ ಸಂಭವಿಸಿದ ಕಟ್ಟಡ ಭುವನ್ ರೆಡ್ಡಿ ಹೆಸರಿನಲ್ಲಿತ್ತು. ಈತ ಮೊದಲನೇ […]
ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಅಣ್ಣ-ತಂಗಿ: ಮೃತರ ಕುಟಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಿದ ಡಿಸಿಎಂ ಡಿಕೆ ಶಿವಕುಮಾರ್!
ಕೆಂಗೇರಿ ಕೆರೆಯಲ್ಲಿ ಆಡಲು ಹೋಗಿ ಮುಳುಗಿ ಮೃತಪಟ್ಟಿದ್ದ ಅಣ್ಣ-ತಂಗಿಯ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ 5 ಲಕ್ಷ ರೂ. ಪರಿಹಾರ ಮೊತ್ತವನ್ನು ಡಿಸಿಎಂ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಅಣ್ಣ ಶ್ರೀನಿವಾಸ್ (13) ತಂಗಿ ಮಹಾಲಕ್ಷ್ಮೀ (11) ಕೆರೆಗೆ ನೀರಲು ಹೋಗಿದ್ದರು. ಈ ವೇಳೆ ಕೆರೆಯ ಬಳಿ ಆಟವಾಡುತ್ತಿದ್ದಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರು ಮೃತಪಟ್ಟಿದ್ದರು. ಭಾರೀ ಮಳೆಯಿಂದಾಗಿ ತುಂಬಿ ಹರಿಯತ್ತಿದ್ದ ಕೆರೆ ಬಳಿ ಹೋಗಿದ್ದ ಅಣ್ಣ-ತಂಗಿ ನಾಪತ್ತೆಯಾಗಿರುವ ಸುದ್ದಿ ತಿಳಿದ ಕೂಡಲೇ […]
ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಮೂವರು ಕಾರ್ಮಿಕರ ಸಾವಿನ ಶಂಕೆ
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದ ಪರಿಣಾಮ ಆವಶೇಷಗಳಡಿ 16 ಮಂದಿ ಸಿಲುಕಿದ್ದು ಮೂವರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಹೆಣ್ಣೂರು ಬಳಿಯ ಬಾಬಾ ಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದ್ದು, ಹೊರರಾಜ್ಯದಿಂದ ಬಂದಿರುವ ಕಾರ್ಮಿಕರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕದ ದಳದ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಕಟ್ಟಡ ಕುಸಿದ ಸ್ಥಳಕ್ಕೆ ಸಚಿವ ಕೆಜೆ ಜಾರ್ಜ್ ಕೂಡ […]
“ಮಗ”ನ ಹೆಸರ “ಕಂಪೆನಿ”ಗೆ ಲಕ್ಷಾಂತರ ರೂ “ಧಾರೆ”..! “ಟೆಂಡರ್” ನಿಯಮ ಉಲ್ಲಂಘಿಸಿ ಹಣ “ಟ್ರಾನ್ಸ್ ಫರ್”..? “ಅಕ್ರಮ” ನಡೆದ್ರೂ ಕ್ರಮ ಕೈಗೊಳ್ಳಲು “ಮೀನಾಮೇಷ”ವೇಕೇ..?!
ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಸುಂದರ ಬೆಂಗಳೂರು… ಸ್ಮಾರ್ಟ್ ಸಿಟಿ ಮಾಡುತ್ತೇವೆ ಎಂದು ಹೊರಟಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ ಗಿರಿನಾಥ್ ಅದೆಲ್ಲಕ್ಕಿಂತ ಮುನ್ನ ತುರ್ತಾಗಿ ಮಾಡಬೇಕಿ ರುವ ಕೆಲಸವೇ ಬೇರೆಯಿದೆ. ಬೆಂಗಳೂರನ್ನು ಸ್ವಚ್ಛ ಸುಂದರವಾಗಿಟ್ಟುಕೊಳ್ಳುವ ಮುನ್ನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಅದರ ಆಡಳಿತವನ್ನು ಸರಿಯಾಗಿಟ್ಟುಕೊಳ್ಳಲಿ.ಅವರ ಅಧೀನದಲ್ಲಿರುವ ಅಧಿಕಾರಿ-ಸಿಬ್ಬಂದಿ ನಡೆಸುತ್ತಿರುವ ಅಂದಾದರ್ಬಾರ್ ಗೆ ಕಡಿವಾಣ ಹಾಕಿ ಅವರನ್ನೆಲ್ಲಾ ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಬೇಕಿದೆ.ಅದನ್ನು ಮಾಡದೆ ಬೇರೆ ಏನನ್ನೇ ಮಾಡಿದ್ರೂ ಅದೆಲ್ಲಾ ವೇಸ್ಟ್…ವೇಸ್ಟ್…ಒನ್ಸ್ ಅಗೈನ್ ವೇಸ್ಟ್ ಅಷ್ಟೆ.. ಇದನ್ನೆಲ್ಲಾ ಹೇಳೊಕ್ಕೆ ಕಾರಣವೂ […]
ಮಳೆ ನಿರ್ವಹಣೆ ಹೆಸರಲ್ಲಿ ಬಿಬಿಎಂಪಿಯಿಂದ ಕೋಟ್ಯಂತರ ರೂ. ದುರ್ಬಳಕೆ?
ಬೆಂಗಳೂರಿನಲ್ಲಿ ಮಳೆಯಾದರೆ ಜನರು ಪರದಾಡುತ್ತಿದ್ದರೆ, ಬಿಬಿಎಂಪಿ ಅಧಿಕಾರಿಗಳು ಖುಷಿಯಿಂದ ತೇಲಾಡುತ್ತಿರುತ್ತಾರೆ. ಇದಕ್ಕೆ ಕಾರಣ ಸರಕಾರದಿಂದ ಬರುವ ಹಣ ಹೊಡೆಯಬಹುದಲ್ವಾ ಅಂತ! ಹೌದು, ಬೆಂಗಳೂರಿನಲ್ಲಿ ಸಣ್ಣ ಮಳೆಯಾದರೂ ಸಮಸ್ಯೆಗಳು ಕಂಡು ಬರುತ್ತವೆ. ಚರಂಡಿಗಳು ತುಂಬಿ ಹರಿದು ರಸ್ತೆಯೆಲ್ಲಾ ಜಲಾವೃತಗೊಳ್ಳುತ್ತವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗುತ್ತದೆ. ಆದರೆ ಅಧಿಕಾರಿಗಳು ಹಾಗೂ ಬಿಬಿಎಂಪಿ ಸಿಬ್ಬಂದಿ ಏನೋ ಕೆಲಸ ಮಾಡುತ್ತಿರುವಂತೆ ಗಡಿಬಿಡಿಯಲ್ಲಿ ಓಡಾಡುತ್ತಿರುತ್ತಾರೆ. ಆದರೆ ಯಾವ ಕೆಲಸವೂ ಮಾಡುವುದಿಲ್ಲ. ಅದರಲ್ಲೂ ಶಾಶ್ವತ ಪರಿಹಾರವಂತೂ ಕಾಣುವುದಿಲ್ಲ. ಇದರಿಂದ ಬೆಂಗಳೂರಿನ ಸಮಸ್ಯೆ ಬಗೆಹರಿಯುವುದೇ […]
ಮಹತ್ವಾಕಾಂಕ್ಷಿ `ಕಾವೇರಿ 5ನೇ ಹಂತದ ಯೋಜನೆ’ ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು ನಾನೇ ಶಂಕುಸ್ಥಾಪನೆ ಮಾಡಿ ನನ್ನಿಂದಲೇ ಉದ್ಘಾಟನೆಯಾಗಿದೆ. ನುಡಿದಂತೆ ನಡೆದದ್ದಕ್ಕೆ ಮತ್ತೊಂದು ಸಾಕ್ಷಿ ನಿಮ್ಮ ಮುಂದಿದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಮತ್ತು ಹಿಂದಿನ ಸರ್ಕಾರಗಳು ಅಗತ್ಯ ಹಣ ಬಿಡುಗಡೆ ಮಾಡದೆ ನಿರಾಸಕ್ತಿ ವಹಿದಿದ್ದರಿಂದ ಯೋಜನೆ ನಿಧಾನವಾಯಿತು. ಮತ್ತೆ ನಾವು ಅಧಿಕಾರಕ್ಕೆ ಬಂದು […]
ಕಾವೇರಿ-5 ನೇ ಹಂತದ ಯೋಜನೆ ಮಾಡಿದ್ದು ಬಿಜೆಪಿ, ಹೆಸರು ತೆಗೆದುಕೊಳ್ಳುತ್ತಿರುವುದು ಕಾಂಗ್ರೆಸ್: ಆರ್.ಅಶೋಕ
ಪೂಜೆ ಮುಗಿದ ನಂತರ ಕೊನೆಯಲ್ಲಿ ಬಂದು ಮಂಗಳಾರತಿ ಪಡೆಯುವಂತೆ ಕಾವೇರಿ-5ನೇ ಕಾಮಗಾರಿ ಮುಗಿದ ಬಳಿಕ ಕಾಂಗ್ರೆಸ್ ಮುಂದೆ ಬಂದು ಹೆಸರು ಪಡೆದುಕೊಳ್ಳುತ್ತಿದೆ. ಈ ಯೋಜನೆ ಮಾಡಿದ್ದು ಬಿಜೆಪಿ ಎಂದು ಗೊತ್ತಿದ್ದರೂ, ನಾವೇ ಮಾಡಿದ್ದೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ಜಂಭ ಕೊಚ್ಚಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾವೇರಿ 5 ನೇ ಹಂತದ ಯೋಜನೆಯನ್ನು ತಾವೇ ಮಾಡಿದ್ದು ಎಂದು ಜಂಭ ಕೊಚ್ಚಿಕೊಂಡಿದ್ದಾರೆ. 2018 ರ ಜನವರಿ 24 ರಂದು ಈ […]
ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರೀ ಮಳೆಯಾಗಲಿದ್ದು, ರಾಜ್ಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ […]
ಖಾಸಗಿ ಸಂಸ್ಥೆಗಳಲ್ಲೂ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ
ಶಾಲೆ, ಐಟಿ ಬಿಟಿ ಸೇರಿದಂತೆ ಖಾಸಗಿ ಕಂಪನಿಗಳಲ್ಲಿ ನವೆಂಬರ್ 1ರಂದು ಕಡ್ಡಾಯವಾಗಿ ಧ್ವಜಾರೋಹಣ ಮಾಡಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕನ್ನಡ ಭಾಷಾ ಪ್ರೇಮ ಹೆಚ್ಚಲು ಆಗಲು ಜಾಗೃತಿ ಮೂಡಿಸುವ ಉದ್ದೇಶದಿಂದ ಖಾಸಗಿ ಶಾಲಾ-ಕಾಲೇಜು, ಖಾಸಗಿ ಸಂಸ್ಥೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಖಾಸಗಿ ಶಾಲೆಗಳಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಬೇಕು ಹಾಗೂ ಕನ್ನಡ ಸಂಸ್ಕೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆದರೆ ಖಾಸಗಿ ಕಂಪನಿಗಳಲ್ಲಿ ಅದರಲ್ಲೂ ಐಟಿ-ಬಿಟಿ ಕಂಪನಿಗಳಲ್ಲಿ […]