ಇ.ಸ್ವತ್ತು ಉತಾರ ಮಾಡಿಸುವದರಿಂದ ಮೈಕ್ರೋ ಪೈನಾನ್ಸ್ ಗಳ ಹಾವಳಿಯಿಂದ ನಾಗರಿಕರನ್ನು ಪಾರು ಮಾಡಬಹುದು – ರಾಹುಲ್ ಶಿಂಧೆ

ಚಿಕ್ಕೋಡಿ :– ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರು ಚಿಕ್ಕೋಡಿ ತಾಲೂಕಿನ ಗ್ರಾಮ ಪಂಚಾಯಿತಿಗಳಿಗೆ ಬೇಟಿ ನೀಡಿದರು ಇ- ಸ್ವತ್ತು ಉತಾರ ಮಾಡಿಸುವದರಿಂದ ಮೈಕ್ರೋ ಪೈನಾನ್ಸ್ ಗಳ ಹಾವಳಿಯಿಂದ ನಾಗರಿಕರನ್ನು ಪಾರು ಮಾಡಬಹುದು. ಇ- ಸ್ವತ್ತು ಉತಾರ ಪಡೆದ ಫಲಾನುಭವಿಗಳು ರಾಷ್ಟ್ರೀಕೃತ ಬ್ಯಾಂಕಗಳಲ್ಲಿ ಸುಲಭವಾಗಿ ಸಾಲಸೌಲಭ್ಯ ದೊರೆಯುತ್ತದೆ ಕಾರಣ ಎಲ್ಲಾ ಗ್ರಾಮ ಪಂಚಾಯತ ಸದಸ್ಯರು ಶ್ರಮಿಸಬೇಕೆಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ತಿಳಿಸಿದರು. ತಾಲೂಕಿನ ಖಡಕಲಾಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಡಬ್ಲ್ಯೂ.ಟಿ.ಪಿ ವಾಟರ ಸಪ್ಲಾಯಗೆ ಭೇಟಿ ನೀಡಿ ಪರಿಶೀಲಿಸಿದರು. ಖಡಕಲಾಟ ಗ್ರಾಮ ಪಂಚಾಯತಿ ವ್ತಾಪ್ತಿಯ ಪೀರನವಾಡಿ ಗ್ರಾಮದಲ್ಲಿನ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿ ಅಪೂರ್ಣವಾಗಿದ್ದು ಅದನ್ನು ಪೂರ್ಣಗೊಳಿಸಲು ಕಾರ್ಯಪಾಲಕ ಅಭಿಯಂತರರು ಗ್ರಾ.ಕು.ನೀ & ನೈ ಇಲಾಖೆ ಚಿಕ್ಕೋಡಿ ವಿಭಾಗ ಹಾಗೂ ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚಿಸಿದರು. ಮನರೇಗಾ ಯೋಜನೆಗೆ ಸಂಬಂಧಿಸಿದಂತೆ ಖಡಕಲಾಟ, ಪಟ್ಟಣಕುಡಿ ಮತ್ತು ವಾಳಕಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಸಮುದಾಯ ಕುಡಿಯುವ ನೀರಿನ ಬಾವಿಗೆ ಬೇಡಿಕೆ ಇದ್ದು, ಅಂತಹ ಗ್ರಾಮ ಪಂಚಾಯತಿಗಳ ಕ್ರಿಯಾ ಯೋಜನೆಯನ್ನು ಕೂಡಲೇ ಸಿದ್ದಪಡಿಸಿ, ಜಿಲ್ಲಾ ಪಂಚಾಯತಿಯಿಂದ ಅನುಮೋದನೆ ಪಡೆದುಕೊಂಡು ತ್ವರಿತವಾಗಿ ಕಾಮಗಾರಿಯನ್ನು ಪ್ರಾರಂಭಿಸಲು ಕಾರ್ಯನಿರ್ವಾಹಕ ಅಧಿಕಾರಿಗಳು ಚಿಕ್ಕೋಡಿ ತಾಲೂಕ ಪಂಚಾಯತರವರಿಗೆ ಸೂಕ್ತ ನಿರ್ದೇಶನ ನೀಡಿದರು. ನರೇಗಾ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ನವಲಿಹಾಳ ಗ್ರಾಮ ಪಂಚಾಯತಿ ಕಟ್ಟಡ, ಸಂಜೀವಿನಿ ಶೆಡ್, ಗೋದಾಮು ಕಾಮಗಾರಿಗಳನ್ನು ವೀಕ್ಷಿಸಿ, ಕಾರ್ಯನಿರ್ವಾಹಕ ಅಧಿಕಾರಿ, ಸಹಾಯಕ ನಿರ್ದೇಶಕ(ಗ್ರಾ ಉ) ಪಂಚಾಯತ ಅಭಿವೃದ್ಧಿ ಅಧಿಕಾರಿ, ತಾಂತ್ರಿಕ ಸಂಯೋಜಕ, ತಾಂತ್ರಿಕ ಸಹಾಯಕರ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಚಿಕ್ಕೋಡಿ-ಸದಲಗಾ ಮತಕ್ಷೇತ್ರದ ಶಾಸಕರಾದ ಗಣೇಶ ಹುಕ್ಕೇರಿ, ಚಿಕ್ಕೋಡಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಸ್ ಕಾದ್ರೋಳಿ, , ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಚಿಕ್ಕೋಡಿ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಪಾಂಡುರಂಗರಾವ ಪಂ ರಾ ಇಂಜಿಯನಿಯರ ವಿಭಾಗದ ಕಾರ್ಯಪಾಲಕ ಅಭಿಯಂತರಾದ ಪ್ರವೀಣ ಮಠಪತಿ ಸಹಾಯಕ ನಿರ್ದೇಶಕರಾದ( ಗ್ರಾ ಉ) ಶಿವಾನಂದ ಶಿರಗಾಂವೆ, , ಗ್ರಾ.ಕು.ನೀ & ನೈ. ಉಪ ವಿಭಾಗ ದ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಬಿ.ಡಿ ನಾಯಿಕವಾಡಿ ಗ್ರಾ.ಕು.ನೀ&ನೈ ಇಲಾಖೆ ಚಿಕ್ಕೋಡಿ ವಿಭಾಗದ ಅಧಿಕಾರಿಗಳು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಮನರೇಗಾ ಐ.ಇ.ಸಿ ಸಂಯೋಜಕರು, ತಾಂತ್ರಿಕ ಸಂಯೋಜಕ ಆಡಳಿತ ಸಹಾಯಕರು .ತಾಂತ್ರಿಕ ಸಹಾಯಕ ಉಪಸ್ಥಿತರಿದ್ದರು
ಕರವೇ ಸದಸ್ಯತ್ವ ಅಭಿಯಾನಕ್ಕೆ ಸಂಪಾದನಾ ಚರಮೂರ್ತಿ ಮಠದ ಶ್ರೀ ಗಳು ಚಾಲನೆ ನೀಡಿದರು

ಚಿಕ್ಕೋಡಿ :– “ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯತ್ವ ಅಭಿಯಾನಕ್ಕೆ ಚಾಲನೆ “ ಕರವೇ ಸದಸ್ಯತ್ವ ಅಭಿಯಾನಕ್ಕೆ ಚಿಕ್ಕೋಡಿ ಪಟ್ಟಣದ ಸಂಪಾದನಾ ಚರಮೂರ್ತಿ ಮಠದ ಶ್ರೀ ಗಳು ಚಾಲನೆ ನೀಡಿದರು, ಚಿಕ್ಕೋಡಿ ತಾಲೂಕಿನ ಕರವೇ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಶ್ರೀ ಮಠದಲ್ಲಿ ತಾಲೂಕಾ ಅಧ್ಯಕ್ಷರಾದ ಸಂಜು ಬಡಿಗೇರ ಮತ್ತು ಉಪಾಧ್ಯಕ್ಷರಾದ ಸಂತೋಷ ಪೂಜಾರಿ ಇವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಕೈ ಜೋಡಿಸಿದರು, ಶ್ರಿಗಳ ಅಮೃತ ಹಸ್ತದಿಂದ ಮೊದಲನೆಯ ಸದಸ್ಯತ್ವವನ್ನು ಪಡೆಯುವ ಮೂಲಕ ಚಾಲನೆ ನೀಡಿದರು. ನಂತರ ಶ್ರೀ […]
ಜಗವ ಹಸಿವು ನೀಗಿಸುವ ಅನ್ನದಾತರನ್ನು ಗುರುತಿಸಿ, ಅವರನ್ನು ಸನ್ಮಾನಿಸಿ, ಗೌರವಿಸುತ್ತಿರುವ ವಿಜಯಕರ್ನಾಟಕ ಕಾರ್ಯ ಶ್ಲಾಘನೀಯ – ಶಶಿಕಲಾ ಜೊಲ್ಲೆ

ಚಿಕ್ಕೋಡಿ :– “ಜಗಕೆ ಅನ್ನವ ನೀಡುವ ರೈತರಿಗೆ ಗೌರವ ಸಲ್ಲಿಸೋಣ” ಸಂಕೇಶ್ವರ ಪಟ್ಟಣದಲ್ಲಿ ‘ವಿಜಯ ಕರ್ನಾಟಕ ಸೂಪರ್ ಸ್ಟಾರ್ ರೈತ- 2024-25’ ಕೃಷಿ ಕ್ಷೇತ್ರದಲ್ಲಿ ಅತ್ಯುತ್ತಮಸಾಧನೆ ಮಾಡಿದ ರೈತರನ್ನು ಗೌರವಿಸುವ ಮತ್ತು ಪ್ರಶಸ್ತಿ ಪುರಸ್ಕಾರ ಸಮಾರಂಭವನ್ನು ಕನ್ನೇರಿ ಸಿದ್ದಗಿರಿ ಮಹಾಸಂಸ್ಥಾನ ಮಠದ ಪ.ಪೂ. ಜಗದ್ಗುರು ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿ, ನಿಡಸೋಸಿ ಶ್ರೀ ದುರದುಂಡಿಶ್ವರ ಸಿದ್ಧಸಂಸ್ಥಾನ ಮಠದ ಉತ್ತರಾಧಿಕಾರಿಗಳಾದ ಪ.ಪೂ. ಶ್ರೀ ನಿಜಲಿಂಗೇಶ್ವರ ಮಹಾಸ್ವಾಮೀಜಿಗಳ ದಿವ್ಯಸಾನಿಧ್ಯದಲ್ಲಿ ಕಾರ್ಯಕ್ರಮಕ್ಕೆ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ […]
ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ, ಸರ್ವೋದಯ ಪ.ಪೂ ಮಹಾವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ತಾಲೂಕಾ ಮಟ್ಟದ ಕ್ರೀಡಾಕೂಟ

ಚಿಕ್ಕೋಡಿ :– ಗ್ರಾಮೀಣ ಮಟ್ಟದಲ್ಲಿ ಕ್ರೀಡಾ ಪ್ರತಿಭೆಗಳು ಬೆಳೆಯಲಿ ಸಿದ್ದಣ್ಣಾ ದುರದುಂಡಿ ತಾಲುಕಿನ ಮಾಂಜರಿ ಗ್ರಾಮದಲ್ಲಿ ಗ್ರಾಮೀಣ ಮಟ್ಟದಲ್ಲಿ ಯುವಕ ಸಂಘಗಳು ಆಯೋಜಿಸುವ ಕ್ರೀಡಾಕೂಟಗಳು ಪ್ರತಿಭೆಗಳನ್ನು ಗುರುತಿಸುವುದಲ್ಲದೆ, ಗ್ರಾಮೀಣ ಜನರಿಗೆ ಉಲ್ಲಾಸದಾಯಕ ವಾತಾವರಣ ಕಲ್ಪಿಸಿಕೊಡುತ್ತವೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಜಿಲ್ಲಾಧ್ಯಕ್ಷರಾದ ಸಿದ್ದಣ್ಣಾ ದುರದುಂಡಿ ಹೇಳಿದ್ದಾರೆ.ಅವರು ಕಳೆದ ದಿನಾಂಕ 22 ರಂದು ಗ್ರಾಮದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ. ಅಂಬೇಡ್ಕರ್ ಕಲಾ ಮತ್ತು ಕ್ರೀಡಾ ಯುವಕ ಮಂಡಳ ಮಾಂಜರಿ. ಕರ್ನಾಟಕ ರಾಜ್ಯ […]
ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆ ಹಾಗೂ ಸುರಕ್ಷಾ ಭೀಮಾ ಯೋಜನೆ ಜಾಗೃತಿ ಜಾಥಾ ಕಾರ್ಯಕ್ರಮ

ಚಿಕ್ಕೋಡಿ :– ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆಯು ವಾರ್ಷಿಕ ಪ್ರೀಮಿಯಂ ಪಾವತಿ 436 ರೂ ತುಂಬಿದರೆ ಒಂದು ವರ್ಷದವರೆಗೆ ಮಾನ್ಯವಾಗಿರುತ್ತದೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ವಾರ್ಷಿಕ ಪ್ರೀಮಿಯಂ ಪಾವತಿ 20 ರೂ ತುಂಬಿದರೆ ಒಂದು ವರ್ಷದವರೆಗೆ ಮಾನ್ಯವಾಗಿರುತ್ತದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಸ್ ಎಸ್ ಕಾದ್ರೋಳಿ ಹೇಳಿದ್ದರು ಮಂಗಳವಾರ ತಾಲೂಕ ಪಂಚಾಯತ ಆವರಣದಲ್ಲಿ ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಜಾಗೃತಿ […]
ಪ್ರಕಾಶ ಹುಕ್ಕೇರಿ ರವರು ಮುಖ್ಯಮಂತ್ರಿ ಆಗುವ ಸಮರ್ಪಕ ನಾಯಕ. ಕಾರ್ಮಿಕ ಸಚಿವ ಸಂತೋಷ ಲಾಡ

ಚಿಕ್ಕೋಡಿ :– ಛತ್ರಪತಿ ಶಿವಾಜಿ ಮಹಾರಾಜರು ಮುಸ್ಲಿಂ ವಿರೋಧಿಯಾಗಿರಲಿಲ್ಲ, ಅವರ ಸೇನೆಯಲ್ಲಿ 60 ಸಾವಿರ ಮುಸ್ಲಿಂ ಸೈನಿಕರಿದ್ದರು. 12 ಜಾತಿಗಳನ್ನು ಸೇರಿಸಿ ಸ್ವರಾಜ್ಯ ನಿರ್ಮಿಸಿ ಇತಿಹಾಸ ಸೃಷ್ಟಿಸಿದ್ದಾರೆ.ಇಂದಿನ ಯುವಕರು ಇತಿಹಾಸ ಓದಬೇಕು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ ಹೇಳಿದರು. ತಾಲೂಕಿನ ಸದಲಗಾ ಪಟ್ಟಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೂಢ ಪ್ರತಿಮೆ ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲೇ ಪ್ರಥಮ ಬಾರಿಗೆ ಮೀಸಲಾತಿ ನೀಡಿದ ಶಾಹು ಮಹಾರಾಜರು. ಸಯಾಜಿರಾವ ಗಾಯಕವಾಡಯವರು ಬಾಬಾಸಾಹೇಬ ಅಂಬೇಡ್ಕರ ಅವರಿಗೆ ಶಿಕ್ಷಣಕ್ಕಾಗಿ ಸಹಾಯ ಮಾಡಿದರು […]
ಮಹಾಕುಂಭಮೇಳದಲ್ಲಿ ಜೊಲ್ಲೆ ಕುಟುಂಬ ಪುಣ್ಯ ಸ್ನಾನ

ಚಿಕ್ಕೋಡಿ :– “ಮಹಾಕುಂಭಮೇಳದಲ್ಲಿ ಜೊಲ್ಲೆ ಕುಟುಂಬ ಪುಣ್ಯ ಸ್ನಾನ “ 144 ವರ್ಷಗಳ ನಂತರ ವೇದಭೂಮಿ ಸನಾತನ ಧರ್ಮದ ಮಹಾಪರ್ವವಾದ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕುಟುಂಬ ಸಮೇತರಾಗಿ ರವಿವಾರ ಪರಮ ಪವಿತ್ರ ಪಾವನೆ ಗಂಗೆ, ಯಮುನಾ ಹಾಗೂ ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಜೊಲ್ಲೆ ಗ್ರೂಪ್ ಸಂಸ್ಥಾಪಕ ಹಾಗೂ ಮಾಜಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ,ಮಾಜಿ ಸಚಿವೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ, ಜ್ಯೋತಿಪ್ರಸಾದ ಜೊಲ್ಲೆ, ಬಸವಪ್ರಸಾದ ಜೊಲ್ಲೆ, ಪ್ರೀಯಾ ಜೊಲ್ಲೆ ಹಾಗೂ […]
ಅಸ್ಪೃಶ್ಯತೆ ನಿರ್ಮೂಲನೆ ಕುರಿತು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಜಾಗೃತಿ ಬೀದಿ ನಾಟಕ ಪ್ರದರ್ಶನ

ಚಿಕ್ಕೋಡಿ :– ತಾಲೂಕ ಸಮಾಜ ಕಲ್ಯಾಣ ಇಲಾಖೆ ಚಿಕ್ಕೋಡಿ ದಿನಾಂಕ ಫೆಬ್ರುವರಿ 14 ಮತ್ತು 15 ರಂದು ಆಯ್ದ ಗ್ರಾಮಗಳಲ್ಲಿ ಅಸ್ಪೃಶ್ಯತೆ ನಿರ್ಮೂಲನೆ ಕುರಿತು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಜಾಗೃತಿ ಬೀದಿ ನಾಟಕ ಪ್ರದರ್ಶನ ಜರುಗಿತು. ಭೋರಗಾಂವ ಗ್ರಾಮದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಪಿಂಟು ಕಾಂಬಳೆ ಇವರು ವಾದ್ಯ ನುಡಿಸಿ ಚಾಲನೆ ನೀಡಿದರು. ಪುರಸಭೆ ಮುಖ್ಯಾಧಿಕಾರಿಗಳಾದ ಎಸ್ ಎಸ್ ಬಿ ತೋಡಕರ ಇವರು ಮಾತನಾಡಿ ಅಸ್ಪೃಶ್ಯತೆ ಸಮಾಜದ ನಿರ್ಮೂಲನೆ ಮಾಡಲು ಪ್ರತಿಯೊಬ್ಬರು […]
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗವು ಪ್ರೆಸಿಡೆನ್ಸಿ ಫೌಂಡೇಶನ್ ದೊಂದಿಗೆ ಮುಂಬರುವ ಶನಿವಾರ ದಿನಾಂಕ 15-02-2025 ರಂದು ಬೆಂಗಳೂರಿನಲ್ಲಿ ಮೇಗಾ ಜಾಬ್ ಮೇಳವನ್ನು ಆಯೋಜಿಸಲಾಗಿರುತ್ತದೆ

ಬೆಂಗಳೂರು :– ಪತ್ರಿಕಾ ಪ್ರಕಟಣೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗವು ಪ್ರೆಸಿಡೆನ್ಸಿ ಫೌಂಡೇಶನ್ ದೊಂದಿಗೆ ಮುಂಬರುವ ಶನಿವಾರ ದಿನಾಂಕ 15-02-2025 ರಂದು ನಗರದ ಖುದ್ದೂಸ್ ಸಾಹೇಬ್ ಇದ್ದಾ ಮೈದಾನ, ಮಿಲ್ಲರ್ಸ್ ರಸ್ತೆ ಬೆಂಗಳೂರಿನಲ್ಲಿ ಮೇಗಾ ಜಾಬ್ ಮೇಳವನ್ನು ಆಯೋಜಿಸಲಾಗಿರುತ್ತದೆ. ಇದರಲ್ಲಿ ರಾಷ್ಟ್ರದ ಪ್ರಮುಖ ಕಂಪನಿಗಳು ಭಾಗವಹಿಸುತ್ತಿದ್ದಾರೆ. ರಾಜ್ಯದ ನಿರುದ್ಯೋಗಿ ಅಲ್ಪಸಂಖ್ಯಾತರಿಗೆ ಸುವರ್ಣ ಅವಕಾಶವಾಗಿರುತ್ತದೆ. ಸದರಿ ದಿನಾಂಕದಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6ಗಂಟೆಯವರೆಗೆ ಇದರಲ್ಲಿ ಪಾಲುಗೊಂಡು ಉದ್ಯೋಗವಕಾಶವನ್ನು ಸದುಪಯೋಗಿಸಿಕೊಳ್ಳಲು ಕೋರಲಾಗಿದೆ.
ಸಂಕೇಶ್ವರ ಪಟ್ಟಣದ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆ ನಿ. ಇದರ ನೂತನ ಅಧ್ಯಕ್ಷರಾಗಿ ಶ್ರೀ ಬಸವರಾಜ ಕಲ್ಲಟ್ಟಿ, ಉಪಾಧ್ಯಕ್ಷರಾಗಿ ಶ್ರೀ ಅಶೋಕ ಪಟ್ಟಣಶೆಟ್ಟಿ ಅವಿರೋಧವಾಗಿ ಆಯ್ಕೆ

ಚಿಕ್ಕೋಡಿ :– ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯ ಸಮಗ್ರ ಅಭಿವೃದ್ಧಿ ನಮ್ಮ ಧ್ಯೇಯ ಸಂಕೇಶ್ವರ ಪಟ್ಟಣದ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆ ನಿ. ಇದರ ನೂತನ ಅಧ್ಯಕ್ಷರಾಗಿ ಶ್ರೀ ಬಸವರಾಜ ಕಲ್ಲಟ್ಟಿ, ಉಪಾಧ್ಯಕ್ಷರಾಗಿ ಶ್ರೀ ಅಶೋಕ ಪಟ್ಟಣಶೆಟ್ಟಿ ನಮ್ಮ ನೇತೃತ್ವದಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದು, ಅವರಿಗೆ ಚಿಕ್ಕೋಡಿ ಲೋಕಸಭೆ ಮಾಜಿ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಅಭಿನಂದನೆ ಸಲ್ಲಿಸಿ, ತಮ್ಮ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಪ್ರಗತಿ ಪಥದಲ್ಲಿ ಮುನ್ನಡೆಯಲಿ ಎಂದು ಶುಭ ಹಾರೈಸಿದ ಕ್ಷಣಗಳು. ನಿಪ್ಪಾಣಿಯ […]