ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಮೂವರು ಕಾರ್ಮಿಕರ ಸಾವಿನ ಶಂಕೆ

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದ ಪರಿಣಾಮ ಆವಶೇಷಗಳಡಿ 16 ಮಂದಿ ಸಿಲುಕಿದ್ದು ಮೂವರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.

ಹೆಣ್ಣೂರು ಬಳಿಯ ಬಾಬಾ ಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದ್ದು, ಹೊರರಾಜ್ಯದಿಂದ ಬಂದಿರುವ ಕಾರ್ಮಿಕರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕದ ದಳದ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಕಟ್ಟಡ ಕುಸಿದ ಸ್ಥಳಕ್ಕೆ ಸಚಿವ ಕೆಜೆ ಜಾರ್ಜ್ ಕೂಡ ಭೇಟಿ ನೀಡಿ ಪರಿಹಾರ ಕಾರ್ಯದ ಪರಿಶೀಲನೆ ನಡೆಸಿದ್ದಾರೆ.

6 ಅಂತಸ್ತಿನ ಕಟ್ಟಡ ನಿರ್ಮಾಣ ಹಂತದಲ್ಲಿದ್ದು, ಮಂಗಳವಾರ ಸಂಜೆ ವೇಳೆಗೆ ಕಾಮಗಾರಿ ನಡೆಯುವಾಗಲೇ ಕುಸಿದು ಬಿದ್ದಿದೆ. ಕಟ್ಟಡದಲ್ಲಿದ್ದ ಹಲವು ಕಾರ್ಮಿಕರು ಓಡಿ ಬಂದು ಜೀವ ರಕ್ಷಿಸಿಕೊಂಡಿದ್ದು, ಇನ್ನೂ ಕೆಲವರು ಸಿಲುಕಿಕೊಂಡಿದ್ದಾರೆ. ರಕ್ಷಣಾ ಸಿಬ್ಬಂದಿ ಒಬ್ಬ ಕಾರ್ಮಿಕನನ್ನು ರಕ್ಷಿಸಿದ್ದಾರೆ.

Share this post:

Leave a Reply

Your email address will not be published. Required fields are marked *