ವರದಿ : ಮಿಯಾಲಾಲ ಕಿಲ್ಲೇದಾರ
ಚಿಕ್ಕೋಡಿ :–
- ತಾಲುಕಿನ ಯಕ್ಸಂಬಾ13 ನೇ ಪ್ರೇರಣಾ ಉತ್ಸವದ ಪ್ರೇರಣಾ ಪುರಸ್ಕಾರವನ್ನು ನವದೆಹಲಿಯ ವಿಶೇಷ ಚೇತನ ಮಕ್ಕಳಿಗೆ ಸೇವೆ ಸಲ್ಲಿಸಿದ ಕು.ಯಾಸಿಕಾ ಭಟ್ಟ ಅವರಿಗೆ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಜಿ,ಚಿಕ್ಕೋಡಿ ಲೋಕಸಭೆ ಮಾಜಿ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ,ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆಯ ಅಧ್ಯಕ್ಷರಾದ ಶ್ರೀ. ಜ್ಯೋತಿಪ್ರಸಾದ ಜೊಲ್ಲೆ ಹಾಗೂ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಶ್ರೀ. ಬಸವಪ್ರಸಾದ ಜೊಲ್ಲೆ ಯವರು ಪ್ರೇರಣಾ ಪುರಸ್ಕಾರ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಉತ್ತರಾಖಂಡದ ಕುಟುಂಬದಲ್ಲಿ ವಿಶೇಷ ಮಗುವಾಗಿ ಜನಿಸಿದ ದೆಹಲಿ ಮೂಲದ ಯಶಿಕಾ ಕ್ರೀಡೆಯಲ್ಲಿ ಭಾಗವಹಿಸುವಿಕೆಯೊಂದಿಗೆ ಮಾನಸಿಕ ಸಮಸ್ಯೆಗಳನ್ನು ಸೋಲಿಸಿದರು. ಅವರು ಅಧ್ಯಯನದಲ್ಲಿ ಕಠಿಣ ಪರಿಶ್ರಮವನ್ನು ಮಾಡಿ, CBSE 12 ನೇ ತರಗತಿ, ITI ಮತ್ತು ಕಂಪ್ಯೂಟರ್ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ್ದಾರೆ.
ನೆಟ್‌ಬಾಲ್‌ನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕಗಳನ್ನು ಗೆದ್ದು ಅತ್ಯುತ್ತಮ ಅಂತರರಾಷ್ಟ್ರೀಯ ಆಟಗಾರ್ತಿಯಾಗಿದ್ದಾರೆ. ಅವರು ಅಬುಧಾಬಿ (ಯುಎಇ) ನಲ್ಲಿ ಭಾರತವನ್ನು ಪ್ರತಿನಿಧಿಸಿ ಬೆಳ್ಳಿ ಪದಕವನ್ನು ಗೆದ್ದರು. ವಿಶೇಷ ಮಕ್ಕಳಿಗೆ ಮಾತ್ರವಲ್ಲದೆ ಎಲ್ಲರಿಗೂ ನಿಜವಾದ ಪ್ರೇರಣೆಯಾಗಿದ್ದಾರೆ. ವಿಶೇಷ ಒಲಂಪಿಕ್ಸ್ ಬ್ರ್ಯಾಂಡ್ ಅಂಬಾಸಿಡರ್ ಯಾಶಿಕಾ ಆಗಿದ್ದು,ಅವರ ಮುಂದಿನ ಪ್ರಯತ್ನಗಳಿಗೆ ನಾವೆಲ್ಲರೂ ಶುಭ ಹಾರೈಸೋಣ.
ಈ ಸಮಾರಂಭದಲ್ಲಿ ಯಡೂರಿನ ಶ್ರೀಶೈಲ ಸೂರ್ಯಸಿಂಹಾಸನ ಮಹಾಪೀಠದ ಶ್ರೀ ಶ್ರೀ ಶ್ರೀ 1008 ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ, ಹುಕ್ಕೇರಿ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಷ.ಬ್ರ. ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿಗಳು, ಶೇಗುಣಸಿಯ ಡಾ.ಮಹಾಂತಪ್ರಭು ಸ್ವಾಮಿಜಿ ಹಾಗೂ ಬಾವನ ಸವದತ್ತಿ ಓಂಕಾರ ಆಶ್ರಮದ ಮಾತೋಶ್ರೀ ಭ್ರಮರಾಂಬಿಕಾ ದೇವಿ ಸ್ವಾಮೀಜಿಗಳ ದಿವ್ಯ ಸಾನಿಧ್ಯ ವಹಿಸಿದ್ದರು.
.