ಬೆಂಗಳೂರು :–
ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ ಕುಂದು-ಕೊರತೆಗಳು ಹಾಗೂ ವಿವಿಧ ಸಮಸ್ಯೆಗಳನ್ನು ದಾಖಲಿಸಲು
ಪಂಚಮಿತ್ರ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ ಸಾರ್ವಜನಿಕರು ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಮಾಡಬಹುದು ಎಂದು ಇಲಾಖೆ ತಿಳಿಸಿದೆ
ಗ್ರಾಮ ಪಂಚಾಯಿತಿಯಲ್ಲಿ ಆಸ್ತಿ ತೆರಿಗೆ ಪಾವತಿ ಹಾಗೂ ಜನನ ಮತ್ತು ಮರಣ ಪ್ರಮಾಣ ಪತ್ರದ ಮಾಹಿತಿ ಬೇಕಿದ್ದಲ್ಲಿ, ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ, ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜಾಬ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಕೆಗೆ, ಗ್ರಾಮದ ರಸ್ತೆ ದುರಸ್ಥಿಗೆ ದೂರು ನೀಡಲು ಪಂಚಮಿತ್ರ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ ಕುಂದುಕೊರತೆ ಬಗ್ಗೆ ಸಾರ್ವಜನಿಕರು ತಿಳಿಸಬಹುದು.
ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಲು ಅವಕಾಶವಿರಲಿದೆ.