ಚಿಕ್ಕೋಡಿ :-
ಅತ್ಯುತ್ತಮ ಚುನಾವಣೆ ಪದ್ಧತಿಗಳೊಂದಿಗೆ ಉತ್ತಮವಾಗಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಷ್ ಸಂಪಗಾಂವಿ ಅವರಿಗೆ ಅತ್ಯುತ್ತಮ ಚುನಾವಣೆ ಪದ್ದತಿಗಳ ಸಹಾಯಕ ಚುನಾವಣಾಧಿಕಾರಿ ಪ್ರಶಸ್ತಿಯನ್ನು ರಾಜ್ಯಪಾಲ ಥಾವರಚಂದ್ ಗೆಹೋಟ್ ಅವರು ಮತದಾರರ ದಿನಾಚರಣೆ ಅಂಗವಾಗಿ ಶನಿವಾರ ಬೆಂಗಳೂರಿನಲ್ಲಿ ಪ್ರದಾನ ಮಾಡಿದರು.
2024-25 ನೇ ಸಾಲಿನ ನಡೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ರಾಯಚೂರಿನಲ್ಲಿ ಸಹಾಯಕ ಚುನಾವಣಾ ಅಧಿಕಾರಿಯಾಗಿ ಅತ್ಯುತ್ತಮ ಸೇವೆ ಸಲ್ಲಿಸಿರುವುದನ್ನು ಚುನಾವಣಾ ಆಯೋಗ ಗುರುತಿಸಿ 2024-25ನೇ ಸಾಲಿನ ಅತ್ಯುತ್ತಮ ಚುನಾವಣೆ ಪದ್ದತಿಗಳ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಸುಭಾಷ್ ಸಂಪಗಾಂವಿ ಅವರ ಕಾರ್ಯಕ್ಕೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಅಭಿನಂದಿಸಿದ್ದಾರೆ