ಸಂಕೇಶ್ವರ ಪಟ್ಟಣದ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆ ನಿ. ಇದರ ನೂತನ ಅಧ್ಯಕ್ಷರಾಗಿ ಶ್ರೀ ಬಸವರಾಜ ಕಲ್ಲಟ್ಟಿ, ಉಪಾಧ್ಯಕ್ಷರಾಗಿ ಶ್ರೀ ಅಶೋಕ ಪಟ್ಟಣಶೆಟ್ಟಿ ಅವಿರೋಧವಾಗಿ ಆಯ್ಕೆ


ಚಿಕ್ಕೋಡಿ :–

ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯ ಸಮಗ್ರ ಅಭಿವೃದ್ಧಿ ನಮ್ಮ ಧ್ಯೇಯ

ಸಂಕೇಶ್ವರ ಪಟ್ಟಣದ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆ ನಿ. ಇದರ ನೂತನ ಅಧ್ಯಕ್ಷರಾಗಿ ಶ್ರೀ ಬಸವರಾಜ ಕಲ್ಲಟ್ಟಿ, ಉಪಾಧ್ಯಕ್ಷರಾಗಿ ಶ್ರೀ ಅಶೋಕ ಪಟ್ಟಣಶೆಟ್ಟಿ ನಮ್ಮ ನೇತೃತ್ವದಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದು, ಅವರಿಗೆ ಚಿಕ್ಕೋಡಿ ಲೋಕಸಭೆ ಮಾಜಿ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಅಭಿನಂದನೆ ಸಲ್ಲಿಸಿ, ತಮ್ಮ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಪ್ರಗತಿ ಪಥದಲ್ಲಿ ಮುನ್ನಡೆಯಲಿ ಎಂದು ಶುಭ ಹಾರೈಸಿದ ಕ್ಷಣಗಳು.

ನಿಪ್ಪಾಣಿಯ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ ಪ್ರಗತಿ ಪಥದಲ್ಲಿ ಸಾಗಿದ್ದು, ಅದೇ ರೀತಿ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯು ಸಕಾಲದಲ್ಲಿ ರೈತರಿಗೆ ಬಿಲ್ ಪಾವತಿ,ಕಾರ್ಮಿಕರಿಗೆ ಸಂಬಳ,ಕಬ್ಬು ಕಟಾವು ಮಾಲೀಕರಿಗೆ ಸಕಾಲದಲ್ಲಿ ಬಿಲ್ ನೀಡಿ,ಮಾದರಿ ಸ್ಕಕರೆ ಕಾರ್ಖಾನೆಯನ್ನಾಗಿ ಮಾಡಿ,ಪ್ರಗತಿ ಮಾಡಲಾಗುವುದು.

ಈ ಸಂದರ್ಭದಲ್ಲಿ ನಿರ್ದೇಶಕ ಮಂಡಳಿ ಸದಸ್ಯರು, ಸ್ಥಳೀಯ ಮುಖಂಡರು ಹಾಗೂ ಸದಸ್ಯರು,ರೈತರು ಉಪಸ್ಥಿತರಿದ್ದರು.

Share this post:

Leave a Reply

Your email address will not be published. Required fields are marked *

Category
Lorem ipsum dolor sit amet, consectetur adipiscing elit eiusmod tempor ncididunt ut labore et dolore magna

You cannot copy content of this page