ಬೆಂಗಳೂರು :–
ಸೋಮವಾರ(ಮಾ.31) ಈದ್ ಉಲ್ ಫಿತ್ರ್ ಆಚರಣೆ ಮಾಡಲು ನಿರ್ಧರಿಸಲಾಗಿದೆ.
ರವಿವಾರ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ವಕ್ಫ್ ಬೋರ್ಡ್ ಕಚೇರಿಯಲ್ಲಿ
ಅಮೀರ್ ಎ ಶರೀಅತ್ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ ಅಧ್ಯಕ್ಷತೆಯಲ್ಲಿ ನಡೆದ
ರಾಜ್ಯ ಚಂದ್ರ ದರ್ಶನ ಸಮಿತಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು ಎಂದು ಮೌಲಾನಾ ಮಕ್ಸೂದ್ ಇಮ್ರಾನ್ ತಿಳಿಸಿದ್ದಾರೆ.