ಚಿಕ್ಕೋಡಿ :–
ತಾಲ್ಲೂಕಿನ ಯಕ್ಸಂಬಾ ಪಟ್ಟಣದಲ್ಲಿ ₹ 4.55 ಕೋಟಿ ಅನುದಾನದಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ,
ಯಕ್ಸಂಬಾ ಪಟ್ಟಣ ಸೇರಿದಂತೆ ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರವನ್ನು ಸರ್ವಾಂಗೀಣ ಅಭಿವೃದ್ಧಿಗಾಗಿ ಹಲವು ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಹಾಗೂ ಗ್ಯಾರಂಟಿ ಯೋಜನೆಗಳ ಮೂಲಕ ಸಾಮಾನ್ಯ ಜನರ ಆರ್ಥಿಕ ಸಮಸ್ಯೆ ನಿವಾರಣೆಯಾಗುತ್ತಿದ್ದು, ಇಂತಹ ಅಭಿವೃದ್ಧಿ ಕಾಮಗಾರಿಗಳಿಂದ ಗ್ರಾಮ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಮೂಲಸೌಕರ್ಯಗಳನ್ನು ಒದಗಿಸಲು ಸಾಧ್ಯವಾಗುತ್ತದೆ ಎಂದು ಶಾಸಕ ಗಣೇಶ ಹುಕ್ಕೇರಿ ಹೇಳಿದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಸುನೀಲ ಸಪ್ತಸಾಗರ ಮಾತನಾಡಿ, ‘ಯಕ್ಸಂಬಾ ಪಟ್ಟಣದಲ್ಲಿ ಇತ್ತೀಚೆಗೆ ಎರಡೂವರೆ ಕೋಟಿ ಅನುದಾನದಲ್ಲಿ ಪಟ್ಟಣ ಪಂಚಾಯಿತಿ ನೂತನ ಕಟ್ಟಡ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿದ ಬೆನ್ನಲ್ಲಿಯೇ ₹ 4.55 ಕೋಟಿ ಅನುದಾನದಲ್ಲಿ ವಿವಿಧ ರಸ್ತೆ ಅಭಿವೃದ್ಧಿಗೆ ಚಾಲನೆ ದೊರೆತಿದ್ದು ಸಂತಸ ತಂದಿದೆ’ ಎಂದು ಹೇಳಿದರು.
ಪಟ್ಟಣದ ಮಹಾದೇವ ಮಂದಿರದಿಂದ ಸಮುದಾಯ ಆರೋಗ್ಯ ಕೇಂದ್ರದವರೆಗೆ ₹1.20 ಕೋಟಿ,
ಅಂಬೇಡ್ಕರ್ ಭವನದಿಂದ ಅಂಕಲಿ ರಸ್ತೆವರೆಗೆ ₹ 2.50 ಕೋಟಿ, ಕಿತ್ತೂರ ಚನ್ನಮ್ಮ ವೃತ್ತದಿಂದ ಮಹಾದೇವ ಮಂದಿರದವರೆಗೆ ₹ 85 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಗಣೇಶ ಹುಕ್ಕೇರಿ ಚಾಲನೆ ನೀಡಿದರು.