ಚಿಕ್ಕೋಡಿ :–
ಪಾರದರ್ಶಕ ಆಡಳಿತ ಹಾಗೂ ಪ್ರಾಮಾಣಿಕ ಸಿಬ್ಬಂದಿ ಕಾರ್ಯ ನಿರ್ವಹಿಸಿದರೆ ಮಾತ್ರ ಸಹಕಾರಿ ಸಂಘಗಳ ಬೆಳವಣಿಗೆ ಸಾಧ್ಯ ಎಂದು ಕೆ.ಎಲ್.ಇ. ಕಾರ್ಯಧ್ಯಕ್ಷ ಡಾ. ಪ್ರಭಾಕರ ಕೋರೆ ಹೇಳಿದರು.
ತಾಲುಕಿನ ಸಿದ್ದಾಪುರವಾಡಿ ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ವಿವಿದೊದ್ದೇಶ ಪ್ರಾಥಮಿಕ ಗ್ರಾಮೀಣ ಸಹಕಾರಿ ಸಂಘದ ನೂತನ ಕಟ್ಟಡದ ಉದ್ಘಾಟಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಳೆದ 22 ವರ್ಷಗಳಿಂದ ಚಿಕ್ಕ ಗ್ರಾಮವಾದ ಸಿದ್ದಾಪುರವಾಡಿ ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ಸಹಕಾರಿ ಸಂಘವು ನಿಸ್ವಾರ್ಥ ಸೇವೆ ಸಲ್ಲಿಸಿ ಇಂದು ನೂತನ ಕಟ್ಟಡ ನಿರ್ಮಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇದಕ್ಕೆ ಅಡಳಿತ ಮಂಡಳಿಯ ನಿಸ್ವಾರ್ಥ ಸೇವೆಯೆ ಕಾರಣ ಎಂದರು.
ಶಾಸಕ ಗಣೇಶ ಹುಕ್ಕೇರಿ ಮಾತನಾಡಿ, ಶ್ರೀ ಸಿದ್ದೇಶ್ವರ ಸಂಘವು ನೂತನ ಕಟ್ಟಡ ನಿರ್ಮಿಸಿ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸಂಘದ ಗೋದಾಮು ನಿರ್ಮಿಸಲು 20 ಲಕ್ಷ ರೂ ಅನುದಾನ ನೀಡುವುದಾಗಿ ಹೇಳಿದರು. ಸಿದ್ದಾಪುರವಾಡಿ ಗ್ರಾಮದಲ್ಲಿನ ರಸ್ತೆಗಳ ಅಭಿವೃದ್ಧಿ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
ಸಾನ್ನಿಧ್ಯ ವಹಿಸಿದ್ದ ನಿಡಸೋಸಿಯ ಶ್ರೀ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಮಾತನಾಡಿ, ರೈತರು ಬೆಳೆಯ
ಬೇಕಾದರೆ ಸಹಕಾರ ಕ್ಷೇತ್ರ ಬೆಳೆಯಬೇಕು. ಎಲ್ಲರ ಸಹಕರದಿಂದಲೇ ಸಹಕಾರ ಕ್ಷೇತ್ರ ಬೆಳೆಯುತ್ತದೆ. ಸಹಕಾರದಿಂದ ಎಲ್ಲರೂ ಬದುಕಬೇಕು. ತಾವು ಬೆಳೆಯುವುದರ ಜೊತೆಗೆ ಇನ್ನೊಬ್ಬರನ್ನು ಬೆಳೆಸುವ ಗುಣ ಎಲ್ಲರೂ ಹೊಂದಬೇಕು ಎಂದರು. “
ಮಾಜಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಅಪ್ಪಾಸಾಬ ಕುಲಗುಡೆ ಹಾಗೂ ಅಂಕಲಿ ಗ್ರಾಪಂ ಅಧ್ಯಕ್ಷ ಭೀಮಪ್ಪಾ ಉಮರಾಣೆ ಮುಂತಾದವರು ಮಾತನಾಡಿದರು.
ಉಪಸ್ಥಿತರು ಚಿದಾನಂದ ಕೋರೆ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಮಲ್ಲಿಕಾರ್ಜುನ ಕೋರೆ, ಉಪಾಧ್ಯಕ್ಷ ತಾತ್ಯಾಸಾಹೇಬ ಕಾಟೆ, ಸಂಘದ ಅಧ್ಯಕ್ಷ ರಾಮಗೌಡಾ ಉಮರಾಣೆ, ಉಪಾಧ್ಯಕ್ಷ ರಾಮು ಖಡ್ಡನ್ನವರ ಇದ್ದರು.ಚಿದಾನಂದ ಕೋರೆ ಸಕ್ಕರೆ ಕಾರ್ಖಾನೆಯ ನಿರ್ದೆಶಕರು, ಸಂಘದ ನಿರ್ದೆಶಕರು, ಅಂಕಲಿ ಗ್ರಾಪಂ ಸದಸ್ಯರು, ಗ್ರಾಮಸ್ಥರು, ಮಹಿಳೆಯರು ಇದ್ದರು.ಧರೆಪ್ಪಾ ಕೆರೂರೆ, ಧರಪ್ಪಾ ಮಾನ, ಎನ್.ಆರ್. ಉಮರಾಣೆ ಕಾರ್ಯಕ್ರಮ ನಿರ್ವಹಿಸಿದರು.