ನವದೆಹಲಿ :–
ವಕ್ಫ್ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳನ್ನು
ತುರ್ತಾಗಿ ಈ ವಿಷಯವನ್ನು ವಿಚಾರಣೆಗೆ ಪರಿಗಣಿಸುವಂತೆ ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಎ. ಎಮ್. ಸಿಂಫ್ಟಿ ಅವರು, ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ಪೀಠದ ಮುಂದೆ ಮನವಿ ಮಾಡಿದ್ದಾರೆ.
ವಕ್ಫ್ (ತಿದ್ದುಪಡಿ) ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳನ್ನು ಸೂಕ್ತ ಸಮಯದಲ್ಲಿ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ವಕ್ಸ್ ತಿದ್ದುಪಡಿ ಕಾಯ್ದೆ ಸಿಂಧುತ್ವವನ್ನು ಪ್ರಶ್ನಿಸಿ ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ದೆಹಲಿ ಶಾಸಕ ಅಮಾನತುಲ್ಲಾ ಖಾನ್ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ನಾಗರಿಕ ಹಕ್ಕುಗಳ ರಕ್ಷಣಾ ಸಂಘ, ಜಮಿಯತ್ ಉಲಮಾ-ಇ-ಹಿಂದ್, ಸಮಸ್ತ ಕೇರಳ ಜಮಾಯತ್ ಉಲೇಮಾ ಮುಂತಾದ ಸಂಸ್ಥೆಗಳೂ ನ್ಯಾಯಾಲಯಕ್ಕೆ ರಿಟ್ ಅರ್ಜಿ ಸಲ್ಲಿಸಿವೆ.
ಈ ಕಾಯ್ದೆಯು ಮುಸ್ಲಿಮರ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವ ಪಿತೂರಿಯಾಗಿದೆ ಎಂದು ಆರೋಪಿಸಿರುವ ಅರ್ಜಿದಾರರು, ಕಾನೂನುಬಾಹಿರವಾಗಿ ತಿದ್ದುಪಡಿ ಮಾಡಲಾಗಿದ್ದು ಸಂವಿಧಾನದ 2 14, 15, 21, 25, 26, 2 300-2 ವಿಧಿಗಳನ್ನು ಉಲ್ಲಂಘಿಸಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.