ವರದಿ : ಮಿಯಾಲಾಲ ಕಿಲ್ಲೇದಾರ
ಬೆಂಗಳೂರು :–
ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಬಳಿಕ ರಾಜ್ಯ ಬಿಜೆಪಿಯಲ್ಲಿ ಉದ್ಬವಿಸಿರುವ ಭಿನ್ನಮತವನ್ನು ಶಮನಗೊಳಿಸುವ ನಿಟ್ಟಿನಲ್ಲಿ
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರಿಗೆ ಬಿಜೆಪಿ ಹೈಕಮಾಂಡ್ ನಿಂದ ದೆಹಲಿಗೆ ಬುಲಾವ್ ಬಂದಿದೆ.
ಶಾಸಕಾಂಗ ಪಕ್ಷದ ನಾಯಕ ಮತ್ತು ಪಕ್ಷದ ರಾಜ್ಯಾಧ್ಯಕ್ಷ ವಿಚಾರದಲ್ಲಿ ತೀವ್ರಗೊಂಡಿರುವ ಭಿನ್ನಮತವನ್ನು ಶಮನಗೊಳಿಸುವ ನಿಟ್ಟಿನಲ್ಲಿ ಚರ್ಚಿಸಲು ಪಕ್ಷದ ವರಿಷ್ಠರು ಯಡಿಯೂರಪ್ಪ ಅವರನ್ನು ದೆಹಲಿಗೆ ಕರೆಸಿದ್ದಾರೆ.
ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗುವ ಸಾಧ್ಯತೆಗಳಿವೆ. ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಭಿನ್ನಮತವನ್ನು ಶಮನಗೊಳಿಸುವ ಹೊಣೆಯನ್ನು ಯಡಿಯೂರಪ್ಪ ಅವರಿಗೆ ವರಿಷ್ಠರು ವಹಿಸುವ ಸಾಧ್ಯತೆಗಳಿವೆ.
ಪಕ್ಷದ ಹೈಕಮಾಂಡ್ ಕರೆದಿರುವ ಹಿನ್ನೆಲೆಯಲ್ಲಿ ಭಾನುವಾರ ದೆಹಲಿಗೆ ತೆರಳುತ್ತಿರುವ ಯಡಿಯೂರಪ್ಪ ಅವರು,ಭಾನುವಾರ ದೆಹಲಿಯಲ್ಲೇ ಉಳಿದುಕೊಂಡು ಸೋಮವಾರ ಹಿಂತಿರುಗಲಿದ್ದಾರೆ ಎಂದು ತಿಳಿದು ಬಂದಿದೆ.
+ There are no comments
Add yours