ಚಿಕ್ಕೋಡಿ :–
ತಾಲೂಕಿನ ನಾಗರಮುನ್ನೋಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಸುರಿದ ಗಾಳಿ, ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಬಿರುಗಾಳಿ, ಮಳೆಗೆ ಹೊಲದಲ್ಲಿದ್ದ ವಿದ್ಯುತ್ ವೈರ್ ಕಟ್ ಆಗಿ ಬಿದ್ದಿದೆ.
ನಾಗರಮುನ್ನೋಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಗ್ರಾಮದ ಸಿದ್ದಪ್ಪ ಜುಲಪಿ ಎಂಬುವರ ಹೊಲದಲ್ಲಿ ವಿದ್ಯುತ್ ತಂತಿ ಮುರಿದುಬಿದ್ದಿದೆ. ಕಟ್ ಆಗಿ ಬಿದ್ದ ತಂತಿಯಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದು, ಆತಂಕ ಮೂಡಿಸಿದೆ.
ವೈರ್ ಕಟ್ ಆಗಿ ಬಿದ್ದರೂ ಸಹ ಹೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಬಂದಿಲ್ಲ. ಈ ಕುರಿತಂತೆ ಹೆಸ್ಕಾಂ ಸಿಬ್ಬಂದಿಗಳಿಗೆ ಫೋನ್ ಮಾಡಿ ಹೇಳಿದರೂ ಯಾರು ಕೇರ್ ಮಾಡಲಿಲ್ಲ
*ನಾಗರಮುನ್ನೊಳಿ ಹೆಸ್ಕಾಂ ಶಾಖೆಯ ಸಿಬ್ಬಂದಿ ಗಳ ವರ್ತನೆಯ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯುತ್ ತಂತಿ ಕಟ್ ಆಗಿರೋ ಜಮೀನಿನಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಭಯದಲ್ಲೇ ಕೆಲಸ ಮಾಡುವಂತಾಗಿದೆ.