ಚಿತ್ರದುರ್ಗ :–
ಸೈಬರ್ ಕಳ್ಳರು ಹೊಸದೊಂದು ದಾರಿ ಹಿಡಿದಿದ್ದು, ವಿದ್ಯಾರ್ಥಿಗಳು, ಪೋಷಕರು ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಸೂಚಿಸಿದ್ದಾರೆ
ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆಯಾಗಿದೆ
ಹತ್ತನೆ ತರಗತಿ ಫಲಿತಾಂಶ ಪ್ರಕಟವಾಗಬೇಕಿದೆ. ಈ ವೇಳೆಯಲ್ಲಿ ಆನ್ ಲೈನ್ ವಂಚಕರು ಹೊಸದಾದ ರೀತಿಯ ವಂಚನೆಯಲ್ಲಿ ತೊಡಗಿದ್ದಾರೆ. ವಿದ್ಯಾರ್ಥಿಗಳು, ಪೋಷಕರು ಎಚ್ಚರದಿಂದ ಇರುವಂತೆ ತಿಳಿಸಿದೆ.
ಆನ್ ಲೈನ್ ವಂಚಕರು ನಿಮ್ಮ ಮಗ ಅಥವಾ ಮಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಸ್ಕಾಲರ್ ಶಿಪ್ ಹಾಗೂ ಶುಲ್ಕ ರಿಯಾಯಿತಿ ಮಾಡುವುದಾಗಿ ಹೇಳಿ, ಈ ಲಿಂಕ್ ಕ್ಲಿಕ್ ಮಾಡಿ ಅಂತ ತಿಳಿಸುತ್ತಿದ್ದಾರೆ. ಇಂತಹ ಲಿಂಕ್ ಗಳನ್ನು ಕ್ಲಿಕ್ ಮಾಡಬೇಡಿ.

ಒಂದು ವೇಳೆ ಮಾಡಿದರೇ ನಿಮ್ಮ ಮೊಬೈಲ್ ಹ್ಯಾಕ್ ಆಗಿ, ಡಿಜಿಟಲ್ ಅರೆಸ್ಟ್ ಗೆ ಒಳಗಾಗಬಹುದು. ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರಿಕೆಯಿಂದ ಇರಿ ಅಂತ ಹೇಳಿದೆ.
ಸೋ ಸೋಷಿಯಲ್ ಮೀಡಿಯಾಗಳಲ್ಲಿ ಬರುವಂತ ಲಿಂಕ್ ಕ್ಲಿಕ್ ಮಾಡಬೇಡಿ. ಖಾಸಗಿ ಅಥವಾ ಸರ್ಕಾರಿ ಸ್ಕಾಲರ್ ಶಿಪ್ ಗಳನ್ನು ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗುತ್ತದೆ. ಅಲ್ಲಿಯೇ ಅರ್ಜಿಯನ್ನು ಪರಿಶೀಲಿಸಿ ಸಲ್ಲಿಸುವಂತೆ ಪೊಲೀಸ್ ಇಲಾಖೆ ವಿದ್ಯಾರ್ಥಿಗಳು, ಪೋಷಕರಿಗೆ ಮನವಿ ಮಾಡಿದೆ.