ಇನ್ನು ಮುಂದೆ ಮುಸ್ಲಿಮರನ್ನು ಹಿಂದೂ ದತ್ತಿ ಮಂಡಳಿಗಳ ಭಾಗವಾಗಲು ನೀವು ಅನುಮತಿಸುತ್ತೀರಾ? ಅನುಮತಿ ನೀಡುವುದಾದರೆ ಅದನ್ನು ಬಹಿರಂಗವಾಗಿ ಹೇಳಿ” ಎಂದು ಸುಪ್ರೀಂ ಕೋರ್ಟ್

ನವದೆಹಲಿ :–

ಕೇಂದ್ರ ಸರ್ಕಾರ ಹಿಂದೂ ಧಾರ್ಮಿಕ ದತ್ತಿ ಮಂಡಳಿಗಳಲ್ಲಿ ಮುಸ್ಲಿಮರ ನೇಮಕಕ್ಕೆ ಅವಕಾಶ ನೀಡುತ್ತದೆಯೆ?” ಎಂದು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತು

“ಇನ್ನು ಮುಂದೆ ಮುಸ್ಲಿಮರನ್ನು ಹಿಂದೂ ದತ್ತಿ ಮಂಡಳಿಗಳ ಭಾಗವಾಗಲು ನೀವು ಅನುಮತಿಸುತ್ತೀರಾ? ಅನುಮತಿ ನೀಡುವುದಾದರೆ ಅದನ್ನು ಬಹಿರಂಗವಾಗಿ ಹೇಳಿ” ಎಂದು ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಪ್ರಶ್ನಿಸಿತು.

100 ಅಥವಾ 200 ವರ್ಷಗಳ ಹಿಂದೆ ಸಾರ್ವಜನಿಕ ಟ್ರಸ್ಟ್ ಅನ್ನು ವಕ್ಫ್ ಎಂದು ಘೋಷಿಸಿದಾಗ, ಅದನ್ನು ವಕ್ಫ್ ಮಂಡಳಿಯು ಇದ್ದಕ್ಕಿದ್ದಂತೆ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇನ್ನು ವಕ್ಫ್ ಆಸ್ತಿ ಎಂದು ಘೋಷಿಸಲಾದ ಆಸ್ತಿಗಳನ್ನು ಡಿ-ನೋಟಿಫೈ ಮಾಡಲಾಗುವುದಿಲ್ಲ ಎಂದು ಆದೇಶಿಸುವ ಬಗ್ಗೆ ಸುಪ್ರೀಂ ಕೋರ್ಟ್ ಪ್ರಸ್ತಾಪ ಮಾಡಿದೆ. ಆದರೆ ಕೇಂದ್ರ ಸರ್ಕಾರ ಈ ಸಲಹೆಯನ್ನು ವಿರೋಧಿಸಿತು ಮತ್ತು ಅಂತಹ ನಿರ್ದೇಶನದ ನೀಡುವ ಮೊದಲು ವಿಚಾರಣೆ ನಡೆಸುವಂತೆ ಕೋರಿತು

ವಕ್ಫ್ ಕಾಯ್ದೆಯ ಕುರಿತು ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್‌ ಇಂದು ಯಾವುದೇ ಮಧ್ಯಂತರ ಆದೇಶ ನೀಡದೆ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

Share this post:

Leave a Reply

Your email address will not be published. Required fields are marked *

Category
Lorem ipsum dolor sit amet, consectetur adipiscing elit eiusmod tempor ncididunt ut labore et dolore magna

You cannot copy content of this page