ಬೆಳಗಾವಿ :–
ಕರ್ನಾಟಕ ರಾಜ್ಯ ಕುಡಿಯುವ ನೀರು ಮತ್ತು ಒಳಚರಂಡಿ ಇಲಾಖೆಯಿಂದ ಕುಡಿಯುವ ನೀರಿನ ಕಾಮಗಾರಿ ಕೈಗೊಳ್ಳಲಾಗಿದ್ದು, ಹೊಸ ಗಾಂಧಿ ನಗರದ ಬಳಿ ರಸ್ತೆಯ ಬದಿ ಮಣ್ಣು ಅಗೆಯುತ್ತಿದ್ದ ವೇಳೆ
ಪೈಪ್‌ಲೈನ್ ಅಳವಡಿಕೆಗೆ ಆಳವಾಗಿ ಅಗೆಯಲು ಕಾರ್ಮಿಕರು ಕೆಳಗೆ ಇಳಿದಿದ್ದರು. ಈ ವೇಳೆ ಮೇಲಿನಿಂದ ಮಣ್ಣು ಕುಸಿದು ಇಬ್ಬರೂ ಸಿಲುಕಿದ್ದಾರೆ.
ಜತೆಗಿದ್ದ ಕಾರ್ಮಿಕರು ಹಾಗೂ ಸುತ್ತಲಿನ ಜನ ಕೂಡಲೇ ಸಹಾಯಕ್ಕೆ ಧಾವಿಸಿದರಾದರೂ ಮತ್ತಷ್ಟು ಮಣ್ಣು ಕುಸಿಯುವ ಭೀತಿಯಿಂದಾಗಿ ಯಾರೂ ಕೆಳಗೆ ಇಳಿಯುವ ಧೈರ್ಯ ತೋರಲಿಲ್ಲ.ಕೆಲ ಹೊತ್ತಿನ ನಂತರ ಜೆಸಿಬಿಯಿಂದ ಮಣ್ಣು ಎತ್ತಲಾಗಿದ್ದು, ತತ್ ಕ್ಷಣ ಕಾರ್ಮಿಕರನ್ನು ಹೊರಕ್ಕೆ ತೆಗೆದು ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತಾದರೂ ಆದರೆ ಇಬ್ಬರೂ ಬದುಕುಳಿಯಲಿಲ್ಲ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.