ವರದಿ : ಮಿಯಾಲಾಲ ಕಿಲ್ಲೇದಾರ
ನಿಪ್ಪಾಣಿ :–
ಪ್ರಕೃತಿಯು ತನ್ನದೇ ಶೈಲಿಯಲ್ಲಿ ವರ್ತಿಸುತ್ತದೆ. ಸಾಧಾರಣ ಮಳೆ, ಅತಿವೃಷ್ಟಿ, ಪ್ರವಾಹ, ಅನಾವೃಷ್ಟಿಗಳನ್ನೂ ನಿಯಂತ್ರಿಸುವುದು ನಮ್ಮ ಹಿಡಿತದಲ್ಲಿಲ್ಲ. ಆದರೂ ಕೆಲವುದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯ ಹಿನ್ನೆಲೆ, ವೇದಗಂಗಾ ನದಿಯು ತುಂಬಿ ಹರಿಯುತ್ತಿದ್ದು ಪ್ರವಾಹದ ಸನ್ನಿವೇಶ ಎದುರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯ.
ಈ ನಿಟ್ಟಿನಲ್ಲಿ ನಿಪ್ಪಾಣಿ ಮತಕ್ಷೇತ್ರದ ಭಿವಶಿ ಗ್ರಾಮಕ್ಕೆ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಯವರು ಭೇಟಿ, ಪ್ರವಾಹ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶ್ರೀ. ನಿತೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ಸಂಜೀವ್ ಪಾಟೀಲ, ಜಿಲ್ಲಾ ಪಂಚಾಯಿತಿ ಸಿಇಒ ಶ್ರೀ. ಹರ್ಷಲ್ ಬೋಯರ,ಎ ಸಿ ಮಾಧವ ಗಿತ್ತೆ ಹಾಗೂ ಇತರ ಸರ್ಕಾರಿ ಅಧಿಕಾರಿಗಳು ಸ್ಥಳೀಯ ಮುಖಂಡರು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
+ There are no comments
Add yours