ಚಿಕ್ಕೋಡಿ :–
ರಾಜ್ಯ ಗೊಲ್ಲ (ಯಾದವ) ಹಣಬರ ಸಂಘದ ಶತಮಾನೋತ್ಸವ ಹಾಗೂ ಯಾದವಾನಂದ ಸ್ವಾಮೀಜಿಯವರ 16ನೇ ಪಟ್ಟಾಭಿಷೇಕ ಸಮಾರಂಭವನ್ನು ಚಿಕ್ಕೋಡಿ ಪಟ್ಟಣದ ಆರ್.ಡಿ. ಹೈಸ್ಕೂಲ್ ಮೈದಾನದಲ್ಲಿ ಏ.20ರಂದು ಮಧ್ಯಾಹ್ನ 3 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸುವರು’
ಎಂದು ಕರ್ನಾಟಕ ರಾಜ್ಯ ಗೊಲ್ಲ (ಯಾದವ) ಸಂಘದ ರಾಜ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್, ಚಿಕ್ಕೋಡಿ ಸದಲಗಾ ಶಾಸಕ ಗಣೇಶ ಹುಕ್ಕೇರಿ ತಿಳಿಸಿದರು.
ಪಟ್ಟಣದ ಆರ್ ಡಿ ಹೈಸ್ಕೂಲ್ ಮೈದಾನದಲ್ಲಿ ಸಮಾರಂಭದ ಪೂರ್ವ ತಯಾರಿಯನ್ನು ಶುಕ್ರವಾರ ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಚಿತ್ರದುರ್ಗದ ಗೊಲ್ಲಗೇರಿಯ ಶ್ರೀಕೃಷ್ಣ ಯಾದವಾನಂದ ಮಠದ ಕೃಷ್ಣ ಯಾದವಾನಂದ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಶತಮಾನೋತ್ಸವದ ‘ಯಾದವ ಸಂಪದ’ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು.
ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅಮಟೂರ ಬಾಳಪ್ಪರವರ ಭಾವಚಿತ್ರ ಅನಾವರಣ ಮಾಡಲಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಕರ್ನಾಟಕ ಯಾದವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಕೈಪಿಡಿ ಬಿಡುಗಡೆ ಮಾಡುವರು ಎಂದು ಹೇಳಿದರು.
ಹೊಸದುರ್ಗದ ಪುರುಷೋತ್ತಮಾನಂದ ಸ್ವಾಮೀಜಿ, ಶಾಂತವೀರ ಸ್ವಾಮೀಜಿ, ಈಶ್ವರಾನಂದಪುರಿ ಸ್ವಾಮೀಜಿ, ಚಿತ್ರದುರ್ಗದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಬಸವ ಮಾಚಿದೇವ ಸ್ವಾಮೀಜಿ, ಹಾವೇರಿಯ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ, ಕೋಡಿಹಳ್ಳಿಯ ಬಸವ ಬೃಂಗೇಶ್ವರ ಸ್ವಾಮೀಜಿ, ನಿಡಗುಂದಿಯ ಬಳಬಟ್ಟಿಯ ಯೋಗಿ ನಿವೃತಿನಾಥ್ ಮಹಾರಾಜ, ತಂಗಡಿಯ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ, ಚಿಕ್ಕೋಡಿಯ ಸಂಪಾದನಾ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದರು.
ವಿಧಾನ ಪರಿಷತ್ ಸದಸ್ಯ, ಕರ್ನಾಟಕ ರಾಜ್ಯ ಗೊಲ್ಲ (ಯಾದವ) ಸಂಘದ ರಾಜ್ಯಾಧ್ಯಕ್ಷ ಡಿ.ಟಿ.ಶ್ರೀನಿವಾಸ ಅಧ್ಯಕ್ಷತೆ ವಹಿಸುವರು. ಸಚಿವರಾದ ಶಿವಾನಂದ ಪಾಟೀಲ, ಎಂ.ಬಿ.ಪಾಟೀಲ, ಸಂತೋಷ ಲಾಡ್ ಮುಂತಾದವರು ಭಾಗಹಿಸುವರು ಎಂದು ತಿಳಿಸಿದರು.
“ಯಾದವ ಸಮಾಜಕ್ಕೆ ಸರ್ಕಾರ ವಿವಿಧ ಸೌಲಭ್ಯಗಳನ್ನು ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ” ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.
ಚಿತ್ರದುರ್ಗದ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ, ಗೊಲ್ಲ (ಯಾದವ) ಹಣಬರ ಸಂಘದ ಬೆಳಗಾವಿ ಜಿಲ್ಲಾಧ್ಯಕ್ಷ ಶೀತಲ ಮುಂಡೆ, ಮುಖಂಡರಾದ ಮಡಿವಾಳಪ್ಪ ಬಸರಗಿ, ಭರತ ಜೋಗಳೆ, ವಿಠ್ಠಲ ಖೋತ, ವಸಂತ ಕರಾಕಾಯಿ, ಪವನ ಪಾಟೀಲ, ಡಿ ಆರ್ ಬಾಡಕರ, ಮಹಾದೇವ ಕರೋಲಿ, ಮೋಹನ ಪಾಟೀಲ, ಸುರೇಶ ಖೋತ, ಮಯೂರ ಅಮಾತೆ, ಆರ್.ಎನ್.ಪೂಜೇರಿ, ಪುರಸಭೆ ಉಪಾಧ್ಯಕ್ಷ ಇರ್ಫಾನ್ ಬೇಪಾರಿ, ಸದಸ್ಯ ಗುಲಾಬ್ ಬಾಗವಾನ್ ಮುಂತಾದವರು ಇದ್ದರು.