ಬೆಂಗಳೂರು :–
ಗ್ರಾಮ ಪಂಚಾಯಿತಿ 259 ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.
ರಾಜ್ಯದ 133 ತಾಲೂಕುಗಳ 222 ಗ್ರಾಮ ಪಂಚಾಯಿತಿಗಳಲ್ಲಿನ 259 ಸದಸ್ಯ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.
ಚುನಾವಣೆ ನಡೆಯುವ ಗ್ರಾಪಂ ವ್ಯಾಪ್ತಿಯಲ್ಲಿ ಏ.22 ರಿಂದ ಮೇ 14ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.
ಏ.22ರಂದು ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಲಿದ್ದು, 28ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
29ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮೇ. 2ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನ. ಮೇ 11ರಂದು ಮತದಾನ ನಡೆಯಲಿದ್ದು, ಮೇ 13 ಮರು ಮತದಾನ (ಅವಶ್ಯವಿದ್ದರೆ) ನಡೆಯಲಿದೆ. ಮೇ 14ಕ್ಕೆ ಫಲಿತಾಂಶ ಹೊರಬೀಳಲಿದೆ.