ವರದಿ : ಮಿಯಾಲಾಲ ಕಿಲ್ಲೇದಾರ
ನವದೆಹಲಿ :–
ನವದೆಹಲಿಯಲ್ಲಿ, ಮಾನ್ಯ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಜಿ ಅವರನ್ನು ಭೇಟಿ ಮಾಡಿ, ಬಹುದಿನಗಳಿಂದ ಬಾಕಿ ಉಳಿದಿರುವ ಕರಾಡ- ನಿಪ್ಪಾಣಿ -ಬೆಳಗಾವಿ ರೈಲು ಮಾರ್ಗದ ಕಾಮಗಾರಿಯನ್ನು ಆರಂಭಿಸಿ ಪೂರ್ಣಗೊಳಿಸುವಂತೆ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರ ಜೊತೆಗೂಡಿ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಮನವಿ ಮಾಡಿದರು. ಈ ರೈಲು ಮಾರ್ಗ ಪೂರ್ಣಗೊಂಡರೆ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ಸಾವಿರಾರು ಜನರಿಗೆ ಅನುಕೂಲವಾಗಲಿದೆ. ಇದರೊಂದಿಗೆ, ಈ ಕೆಳಗಿನಂತೆ ಇತರ ಮಾರ್ಗಗಳನ್ನು ಪ್ರಾರಂಭಿಸಲು ವಿನಂತಿಸಿದರು.
ಕರಾಡ -ನಿಪ್ಪಾಣಿ-ಬೆಳಗಾವಿ
ಶೇಡಬಾಳ -ಅಥಣಿ -ವಿಜಯಪುರ
ಬೆಳಗಾವಿ -ಕೊಲ್ಲಾಪುರ
ಬೆಳಗಾವಿ -ಕಿತ್ತೂರು -ಧಾರವಾಡ
ಹಾಸನ- ಮಂಗಳೂರು ಮಾರ್ಗ ಆರಂಭಿಸುವಂತೆ ಮನವಿ ಮಾಡಿದರು.
ಇದೇ ಸಮಯದಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲಿ ಬರುವ ಕೆಲವು ನಿಲ್ದಾಣಗಳಲ್ಲಿ ಈ ಕೆಳಕಂಡ ಎಕ್ಸ್‌ಪ್ರೆಸ್ ರೈಲುಗಳು ನಿಲುಗಡೆಯಾಗಬೇಕೆಂದು ವಿನಂತಿಸಿದರು.
ಹುಬ್ಬಳ್ಳಿ -ದಾದರ ಎಕ್ಸ್‌ಪ್ರೆಸ್ (ಉಗಾರನಲ್ಲಿ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ)
ಶರಾವತಿ ಎಕ್ಸ್‌ಪ್ರೆಸ್ ಮತ್ತು ಪುದುಚೇರಿ ಎಕ್ಸ್‌ಪ್ರೆಸ್ (ಶೆಡಬಾಳ ರೈಲು ನಿಲ್ದಾಣನದಲ್ಲಿ ನಿಲುಗಡೆ)
ಅಜ್ಮೀರ್ ಎಕ್ಸ್‌ಪ್ರೆಸ್ ಮತ್ತು ಹರಿಪ್ರಿಯಾ ಎಕ್ಸ್‌ಪ್ರೆಸ್ (ಕುಡಚಿ ಮತ್ತು ರಾಯಬಾಗ ಚಿಕೋಡಿ ರೈಲ್ವೆನಿಲ್ದಾಣಗಳಲ್ಲಿ ನಿಲುಗಡೆ) ಕುರಿತು ಮನವಿ ಸಲ್ಲಿಸಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮಾನ್ಯ ಸಚಿವರು, ಶೀಘ್ರದಲ್ಲೇ ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಹಾರಾಷ್ಟ್ರ ರಾಜ್ಯ ಉಪಾಧ್ಯಕ್ಷರಾದ ಡಾ.ಅಜೀತ ಘೋಪಛಡೆ, ಬೆಳಗಾವಿ ಗ್ರಾಮೀಣ ಜಿಲ್ಲಾ ಅಧ್ಯಕ್ಷರಾದ ಶ್ರೀ ಸಂಜಯ ಪಾಟೀಲ ಉಪಸ್ಥಿತರಿದ್ದರು.
+ There are no comments
Add yours