“ಕಲ್ಲೋಳ ಗ್ರಾಮದಲ್ಲಿ ಒಟ್ಟು 2.20 ಕೋಟಿ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಸುಸಜ್ಜಿತ ಬಸ್ ನಿಲ್ದಾಣ ಉದ್ಘಾಟನೆಗೆ ಸಜ್ಜಾಗಿದೆ”- ಪ್ರಕಾಶ ಹುಕ್ಕೇರಿ

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಚಿಕ್ಕೋಡಿ :—

“ಉದ್ಘಾಟಣೆಗೆ ಸಿದ್ಧವಾಗಿ ನಿಂತ ಸುಸಜ್ಜಿತ ಬಸ್ ನಿಲ್ದಾಣ”


ತಾಲೂಕಿನ ಕಲ್ಲೋಳ ಗ್ರಾಮದಲ್ಲಿ ಒಟ್ಟು 2.20 ಕೋಟಿ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಸುಸಜ್ಜಿತ ಬಸ್ ನಿಲ್ದಾಣ ಉದ್ಘಾಟನೆಗೆ ಸಜ್ಜಾಗಿ ನಿಂತಿದೆ.

ಅಂದಾಜು 1 ಎಕರೆ ವಿಸ್ತೀರ್ಣದ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಬಸ್ ನಿಲ್ದಾಣವು ನಾಲ್ಕು ಫ್ಲಾಟ್‌ಫಾರಂಗಳನ್ನು ಒಳಗೊಂಡಿದೆ.ಪ್ರಯಾಣಿಕರಿಗೆ ಆಸನಗಳ ವ್ಯವಸ್ಥೆ,ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕ ಶೌಚಾಲಯ,ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.

ಬಸ್ ನಿಲ್ದಾಣದಲ್ಲಿ ಟಿಕೆಟ್ ಕಾಯ್ದಿರಿಸುವ ಕೊಠಡಿ, ನಿಯಂತ್ರಣ ಕೊಠಡಿ ಸೇರಿದಂತೆ ವಾಣಿಜ್ಯ ಸಂಕೀರ್ಣಗಳನ್ನೂ ಸಹ ನಿರ್ಮಿಸಲಾಗಿದೆ.

ಗ್ರಾಮೀಣ ಮಟ್ಟದ ವಿದ್ಯಾರ್ಥಿಗಳು,ನೌಕರಸ್ಥರು, ಕೆಲಸಕ್ಕಾಗಿ ಬೇರೆ ಊರುಗಳಿಗೆ ಸಂಚರಿಸುವ ಕೂಲಿ ಕಾರ್ಮಿಕರಿಗೆ ಅನುಕೂಲವಾಗಲೆಂದು ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯ ಜೊತೆಗೆ ಸುಸಜ್ಜಿತ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಚುನಾವಣೆ ವೇಳೆ ನೀಡಿದ ಆಶ್ವಾಸನೆಯಂತೆ ನಮ್ಮ ಸರ್ಕಾರ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದೆ. ಅದರ ಫಲವಾಗಿ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆಯಾಗಿದೆ ಕಾರಣ ಸಾರಿಗೆ ಸಂಸ್ಥೆಯು ಕೂಡ ಲಾಭದತ್ತ ಸಾಗಿದೆ.ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ನನ್ನ ಹಾಗೂ ಶಾಸಕ ಗಣೇಶ ಹುಕ್ಕೇರಿ ಅವರ ಪ್ರಯತ್ನದಡಿ ಈಗಾಗಲೇ ಅವಶ್ಯಕತೆಗೆ ಅನುಗುಣವಾಗಿ ಕ್ಷೇತ್ರದೆಲ್ಲೆಡೆ ಸುಸಜ್ಜಿತ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಪ್ರತಿ ಹಳ್ಳಿಗೂ ಉತ್ತಮ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ನಗರ ಪ್ರದೇಶಗಳಲ್ಲಿ ಇರುವಂತಹ ಬಸ್ ನಿಲ್ದಾಣವನ್ನು ಗ್ರಾಮೀಣ ಭಾಗದಲ್ಲಿ ನಿರ್ಮಿಸಿರುವುದು ತೃಪ್ತಿ ತಂದಿದೆ. ಶೀಘ್ರದಲ್ಲೇ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಬಸ್ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುವುದು ಎಂದು
ಪ್ರಕಾಶ ಹುಕ್ಕೇರಿ,ವಿಧಾನ ಪರಿಷತ್ ಸದಸ್ಯರು ಹೇಳಿದರು.


Share with Your friends

You May Also Like

More From Author

+ There are no comments

Add yours