ನವ ದೆಹಲಿ :–
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೋಮವಾರ ಈ ಬಗ್ಗೆ ಮಾಹಿತಿ ನೀಡಿದ್ದು, ಕೊಳಲು, ತಬಲಾ, ವಯೋಲಿನ್, ಹಾರ್ಮೋನಿಯಂ ಮೊದಲಾದ ವಾದ್ಯಗಳ ಶಬ್ದ ಕಿವಿಗೆ ಇಂಪಾಗಿರುತ್ತದೆ.
ಎಲ್ಲಾ ವಾಹನಗಳಿಗೆ ಇದನ್ನು ಕಡ್ಡಾಯಗೊಳಿಸುವ ಬಗ್ಗೆ ಯೋಚಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಭಾರತೀಯ ಸಂಗೀತ ವಾದ್ಯಗಳ ಶಬ್ದವನ್ನು ಮಾತ್ರ ವಾಹನಗಳ ಹಾರ್ನ್ ಆಗಿ ಬಳಕೆ ಮಾಡಲು ಅನುವಾಗುವಂತೆ ಕಾನೂನು ಜಾರಿಗೆ ಚಿಂತನೆ ನಡೆಸಲಾಗಿದೆ
ವಾಹನಗಳ ಹಾರ್ನ್ ನಲ್ಲಿ ಭಾರತೀಯ ಸಂಗೀತ ವಾದ್ಯಗಳ ಶಬ್ದಗಳನ್ನು ಮಾತ್ರ ಬಳಸುವಂತೆ ಕಾನೂನು ಜಾರಿಗೊಳಿಸಲು ಚಿಂತನೆ ನಡೆದಿದೆ. ತಬಲಾ, ಪಿಟೀಲು, ಕೊಳಲು, ಹಾರ್ಮೋನಿಯಂ ಸೇರಿ ಕೇಳಲು ಹಿತವೆನಿಸುವ
ಭಾರತೀಯ ಸಂಗೀತ ವಾದ್ಯಗಳ ಶಬ್ದಗಳನ್ನು ಹಾರ್ನ್ ಆಗಿ ಎಲ್ಲಾ ವಾಹನಗಳಲ್ಲಿ ಬಳಸುವಂತೆ ಕಾನೂನು ರೂಪಿಸಲಾಗುವುದು ಎಂದು ಹೇಳಿದ್ದಾರೆ.