“ಬಿಬಿಎಂಪಿ ವ್ಯಾಪ್ತಿಯ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ”

ಬೆಂಗಳೂರು :–

ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಬಿಬಿಎಂಪಿ ವತಿಯಿಂದ ಸೈಕಲ್ ವಿತರಿಸಲು ಚಿಂತನೆ ನಡೆಸಲಾಗಿದೆ.

ಈ ಸಲ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದಂತೆ ಸೈಕಲ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಹೆಚ್.ಡಿ. ಕುಮಾರಸ್ವಾಮಿ ಮತ್ತು ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮೊದಲ ಬಾರಿಗೆ ಸರ್ಕಾರಿ ಪ್ರೌಢಶಾಲೆಯ ಹೆಣ್ಣು ಮಕ್ಕಳಿಗೆ ಸೈಕಲ್ ವಿತರಿಸುವ ಕಾರ್ಯಕ್ರಮ ಜಾರಿಗೊಳಿಸಲಾಗಿತ್ತು.

ನಂತರ ಬಾಲಕರಿಗೂ ಯೋಜನೆಯನ್ನು ವಿಸ್ತರಿಸಲಾಗಿತ್ತು. ಬಳಿಕ ಸೈಕಲ್ ವಿತರಣೆ ಯೋಜನೆ ಮುಂದುವರೆಸಲಿಲ್ಲ.

ಬಿಬಿಎಂಪಿ ವ್ಯಾಪ್ತಿಯ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. 2025- 26ರ ಬಜೆಟ್ ನಲ್ಲಿ ಕಲ್ಯಾಣ ಕಾರ್ಯಕ್ರಮಗಳಿಗೆ 721.41 ಕೋಟಿ ರೂ. ಮೀಸಲಿಟ್ಟಿದ್ದು, ಸರ್ಕಾರಿ ಖಾಸಗಿ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಲು ತೀರ್ಮಾನಿಸಲಾಗಿದೆ.

ಬಿಬಿಎಂಪಿ ಶಾಲಾ ವಿದ್ಯಾರ್ಥಿಗಳ ಜೊತೆಗೆ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಖಾಸಗಿ ಶಾಲೆಯ ವಿದ್ಯಾರ್ಥಿಗಲೂ ಕೂಡ ಬಿಬಿಎಂಪಿಗೆ ಅರ್ಜಿ ಸಲ್ಲಿಸಿ ಸೈಕಲ್ ಪಡೆದುಕೊಳ್ಳಬಹುದು ಎನ್ನಲಾಗಿದೆ.

Share this post:

Leave a Reply

Your email address will not be published. Required fields are marked *