“ಸಂವಿಧಾನ ರಕ್ಷಣೆ ಮಾಡಬೇಕು, ದರ ಏರಿಕೆ ನಿಯಂತ್ರಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ”

ಬೆಳಗಾವಿ :–

ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಈಹೊತ್ತು ಬೆಳಗಾವಿ ಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭನೆ ಹಮ್ಮಿಕೊಳ್ಳಲಾಗಿದೆ.
ದರ ಏರಿಕೆಗೆ ವಿರೋಧ, ಸಂವಿಧಾನ ಬಚಾವೋ ಹೆಸರಿನಲ್ಲಿ ಬೆಳಗಾವಿಯಲ್ಲಿ

ಈಹೊತ್ತು ಕಾಂಗ್ರೆಸ್ ಪಕ್ಷದಿಂದ ಧರಣಿ ಹಮ್ಮಿಕೊಳ್ಳಲಾಗಿದೆ. ಸಂವಿಧಾನ ರಕ್ಷಣೆ ಮಾಡಬೇಕು, ದರ ಏರಿಕೆ ನಿಯಂತ್ರಿಸುವಂತೆ ಆಗ್ರಹಿಸಿ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಮುಂಜಾನೆ 11:30 ಕ್ಕೆ ಕಾಂಗ್ರೆಸ್ ಪ್ರತಿಭಟನಾ ಸಮಾವೇಶಕ್ಕೆ ಚಾಲನೆ ನೀಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರು, ಪಕ್ಷದ ನಾಯಕರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕರು, ಮಾಜಿ ಸಚಿವರು ಸೇರಿದಂತೆ ಪಕ್ಷದ ನಾಯಕರು ಭಾಗಿಯಾಗಲಿದ್ದಾರೆ. ಬೆಂಗಳೂರಿನಿಂದ ಸಿಎಂ, ಡಿಸಿಎಂ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ. ಬೆಳಗಾವಿಯ ಸಾಮ್ರಾ ವಿಮಾನ ನಿಲ್ದಾಣಕ್ಕೆ ನಾಯಕರು ಆಗಮಿಸಲಿದ್ದು, ನಂತರ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

Share this post:

Leave a Reply

Your email address will not be published. Required fields are marked *