ವರದಿ : ಮಿಯಾಲಾಲ ಕಿಲ್ಲೇದಾರ
ನಿಪ್ಪಾಣಿ :–
ನಗರದಲ್ಲಿ ಗೌರವಾನ್ವಿತ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಅವರಿಂದ ದೇಶದ ಮಹಿಳೆಯರಿಗೆ ಗೌರಿ ಗಣೇಶ ಹಬ್ಬದ ಉಡುಗೊರೆಯಾಗಿ ರಾಜಕೀಯ ಕ್ಷೇತ್ರದಲ್ಲಿ ಶೇಕಡಾ 33% ಮಹಿಳಾ ಮೀಸಲಾತಿಯನ್ನು ಕಲ್ಪಿಸಿದಕ್ಕೆ ಇಂದು ಪಕ್ಷದ ಕಾರ್ಯಕರ್ತರೊಂದಿಗೆ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಯವರು ವಿಜಯೋತ್ಸವ ಆಚರಿಸಿ,ಸಿಹಿ ಹಂಚಿ ಸಂಭ್ರಮಿಸಿದರು.
ರಾಜಕೀಯದಲ್ಲಿ ಶೇ.33ರಷ್ಟು ಮಹಿಳೆಯರಿಗೆ ಮೀಸಲಾತಿ ಇದು 2023ರ ನಮ್ಮ ಭಾರತ ದೇಶದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ಸಂತಸದ ಸಂಗತಿ. ಮಹಿಳೆಯರು ಮುಂದೆ ಬಂದು ಸಮಾಜದ ರಕ್ಷಣೆ ಮಾಡಿದ ಉದಾಹರಣೆಗಳಿವೆ. ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಯವರು ಜಗಜ್ಯೋತಿ ಬಸವೇಶ್ವರ, ಛತ್ರಪತಿ ಶಿವಾಜಿ ಮಹಾರಾಜರ, ಡಾ. ಬಿ.ಆರ್. ಅಂಬೇಡ್ಕರ ಜಿ,ರೂಪದಲ್ಲಿ ಇಂದು ಮಹಿಳೆಯರಿಗೆ ನ್ಯಾಯ ದೊರಕಿಸಿ ಕೊಟ್ಟಿದ್ದಾರೆ. 12 ನೇ ಶತಮಾನದಲ್ಲಿ ಜಗಜ್ಯೋತಿ ಬಸವೇಶ್ವರರು ಪರಿಕಲ್ಪನೆಯನ್ನು ಇಟ್ಟುಕೊಂಡು ಅನುಭವ ಮಂಟಪವನ್ನು ಆರಂಭಿಸಿ ಮಹಿಳೆಯರಿಗೆ ಮುಂಚೂಣಿಯಲ್ಲಿದ್ದು ಕಾರ್ಯ ಮಾಡಲು ಅವಕಾಶ ಕಲ್ಪಿಸಿದ್ದರು. ಇಂದು ವಿಶ್ವಗುರು ಬಸವಣ್ಣನವರ ರೂಪದಲ್ಲಿ ಮಹಿಳಾ ಮೀಸಲಾತಿ ಅನುಷ್ಠಾನಗೊಳಿಸಿದಕ್ಕಾಗಿ ಮೋದಿ ಜಿ ಅವರಿಗೆ ತುಂಬು ಹೃದಯದ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾಅಧ್ಯಕ್ಷರು,ಸದಸ್ಯರುಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು,ನಗರಸಭೆ ಸದಸ್ಯರು,ಪಕ್ಷದ ಕಾರ್ಯಕರ್ತರು, ಸ್ಥಳೀಯ ಮುಖಂಡರು, ಉಪಸ್ಥಿತರಿದ್ದರು.
+ There are no comments
Add yours