“ನಾಚಿಕೆಗೇಡಿನ ವಿಚಾರ ಎಂದು ಹೇಳುವ ಮೂಲಕ ತಮ್ಮ ದ್ವಿಮುಖ ನೀತಿಯನ್ನು ಪ್ರದರ್ಶಿಸಿದ್ದಾರೆ” : ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌

ಬೆಂಗಳೂರು :–

ಭಾರತ ಹಾಗೂ ಪಾಕಿಸ್ತಾನದ ನಡುವೆ ಈ ದಾಳಿಯಿಂದ ಸೃಷ್ಟಿಯಾಗಿರುವ ಆತಂಕದ ಬಗ್ಗೆ ಈಗ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಪ್ರತಿಕ್ರಿಯಿಸಿದ್ದು, ಇದೊಂದು ನಾಚಿಕೆಗೇಡಿನ ವಿಚಾರ ಎಂದು ಹೇಳುವ ಮೂಲಕ ತಮ್ಮ ದ್ವಿಮುಖ ನೀತಿಯನ್ನು ಪ್ರದರ್ಶಿಸಿದ್ದಾರೆ.

ಇದು ನಾಚಿಕೆಗೇಡಿನ ಸಂಗತಿ,

ನಾವು ಈಗಷ್ಟೇ ಅದರ ಬಗ್ಗೆ ಕೇಳಿದ್ದೇವೆ ಹಿಂದಿನ ಕೆಲವು ಘಟನೆಗಳನ್ನು ಆಧರಿಸಿ, ಏನಾದರೂ ಸಂಭವಿಸಲಿದೆ ಎಂದು ಜನರಿಗೆ ತಿಳಿದಿತ್ತು ಎಂದು ನಾನು ಭಾವಿಸುತ್ತೇನೆ. ಅವರು ಬಹಳ ಸಮಯದಿಂದಲೂ ಫೈಟ್ ಮಾಡ್ತಿದ್ದಾರೆ ಎಂದು ಟ್ರಂಪ್ ಶ್ವೇತಭವನದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಈ ಮೂಲಕ ಭಾರತಕ್ಕೆ, ಪ್ರಧಾನಿ ಮೋದಿಗೆ ಫ್ರೆಂಡ್, ಒಳ್ಳೆಯ ಫ್ರೆಂಡ್ ಎಂದು ಹೇಳುತ್ತಾ ಬೆನ್ನು ತಟ್ಟುತ್ತಿರುವ ಟ್ರಂಪ್ ಅಸಲಿಯತ್ತು ಬಯಲಾಗಿದೆ.

ಹಾಗೆಯೇ ಭಾರತ ಹಾಗೂ ಪಾಕಿಸ್ತಾನ ನಡುವಿನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಎರಡು ಪರಮಾಣು ಹೊಂದಿರುವ ನೆರೆಹೊರೆಯ ದೇಶಗಳು ಶಾಂತಿಯುತ ಪರಿಹಾರ ಕೈಗೊಳ್ಳುವುದನ್ನು ಅಮೆರಿಕಾ ಬಯಸುತ್ತದೆ ಎಂದು ಅವರು ಟ್ವಿಟ್ ಮಾಡಿದ್ದಾರೆ.

ಆದರೆ ವಾಷಿಂಗ್ಟನ್‌ನಲ್ಲಿರುವ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರೊಂದಿಗೆ ಮಾತನಾಡಿದ್ದು, ಭಾರತ ಕೈಗೊಂಡಿರುವ ಮಿಲಿಟರಿ ಕ್ರಮಗಳ ಬಗ್ಗೆ ವಿವರಿಸಿದ್ದಾರೆ ಎಂದು ವಾಷಿಂಗ್ಟನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

“ಚೀನಾ”
ಹಾಗೆಯೇ ಪಾಕಿಸ್ತಾನದ ಮೇಲೆ ಭಾರತ ನಡೆಸಿದ ದಾಳಿಗಳ ಬಗ್ಗೆ ಚೀನಾ ಕಳವಳ ವ್ಯಕ್ತಪಡಿಸಿದ್ದು, ಪರಮಾಣು ಹೊಂದಿರುವ ನೆರೆಹೊರೆಯ ರಾಷ್ಟ್ರಗಳು ಸಂಯಮದಿಂದ ವರ್ತಿಸುವಂತೆ ಒತ್ತಾಯಿಸಿದೆ.

ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ಶಾಂತಿ ಮತ್ತು ಸ್ಥಿರತೆಗೆ ಆದ್ಯತೆ ನೀಡಬೇಕು, ಶಾಂತ ಮತ್ತು ಸಂಯಮದಿಂದಿರಬೇಕು ಮತ್ತು ಪರಿಸ್ಥಿತಿಯನ್ನು ಮತ್ತಷ್ಟು ಜಟಿಲಗೊಳಿಸಲು ಮುಂದಾಗಬಾರದು ಎಂದು ಬೀಜಿಂಗ್ ವಿದೇಶಾಂಗ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

Share this post:

Leave a Reply

Your email address will not be published. Required fields are marked *