ಬೆಂಗಳೂರು :–
ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿವಿಧ ಕೋರ್ಸ್‌ಗಳ ಪ್ರವೇಶಕ್ಕಾಗಿ
ಕರ್ನಾಟಕದ ವೈದ್ಯಕೀಯ ಎಂಜಿನಿಯರಿಂಗ್ ಮತ್ತು ದಂತ ಕಾಲೇಜುಗಳ ಒಕ್ಕೂಟ (ಕಾಮೆಡ್-ಕೆ) ಮೇ 10ರಂದು ನಿಗದಿಪಡಿಸಿದ್ದ ಪ್ರವೇಶ ಪರೀಕ್ಷೆಯನ್ನು ಉತ್ತರ ಭಾರತದ 13 ನಗರಗಳಲ್ಲಿ ಮುಂದೂಡಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಗಡಿ ರಾಜ್ಯಗಳ ನಗರಗಳಲ್ಲಿ ಮಾತ್ರ ಪರೀಕ್ಷೆ ಮುಂದೂಡಲಾಗಿದೆ.
ಬೆಂಗಳೂರು ಸೇರಿದಂತೆ ಉಳಿದ ನಗರಗಳಲ್ಲಿ ಈಹೊತ್ತು ಶನಿವಾರ ಮೇ 10ರಂದೇ ಪರೀಕ್ಷೆ ನಡೆಯಲಿದೆ ಎಂದು ಕಾಮೆಡ್ ಕೆ ಹೇಳಿದೆ.