ಬೆಂಗಳೂರು :–
ರಾಜ್ಯದಲ್ಲಿ ನರೇಗಾ ಯೋಜನೆಯಲ್ಲಿ ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು, ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ( ದಿಶಾ ಮೀಟಿಂಗ್) ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ದಿಶಾ ಸಭೆಗಳು ನಿಗದಿತವಾಗಿ ನಡೆಯಬೇಕು ಎಂದು ಸೂಚನೆ ನೀಡಿದ ಮುಖ್ಯಮಂತ್ರಿಗಳು, ಸಂಸದರೂ ಈ ಬಗ್ಗೆ ಆಸಕ್ತಿ ವಹಿಸಬೇಕು.
ಮೂರು ತಿಂಗಳ ಒಳಗೆ ನರೇಗಾ ಕ್ರಿಯಾ ಯೋಜನೆ ಕಡ್ಡಾಯವಾಗಿ ಸಿದ್ಧಪಡಿಸಬೇಕು. ಏನೇ ಕಾರಣದಿಂದ ಹಿಂದಿನ ಕ್ರಿಯಾ ಯೋಜನೆ ಆಗಿದ್ದರೆ ಅದನ್ನು ಮುಂದಿನ ಕ್ರಿಯಾ ಯೋಜನೆಯಲ್ಲಿ ಸೇರ್ಪಡೆಗೊಳಿಸಿ ಎಂದು ಸಿಎಂ ಸೂಚನೆ ನೀಡಿದ್ದಾರೆ.