ಚಿಕ್ಕೋಡಿ :–
ಪೆಹಲ್ಗಾಮ್ ಉಗ್ರರ ದಾಳಿಗೆ ಪ್ರತಿಕಾರವಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಹೆಮ್ಮೆಯ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಜೀ ಹಾಗೂ ಪಕ್ಷದ ಕರೆಯ ಮೇರೆಗೆ ದೇಶಾದ್ಯಂತ ತಿರಂಗಾ ಯಾತ್ರೆ ಆಯೋಜಿಸಿರುವ ಹಿನ್ನೆಲೆಯಲ್ಲಿ

ಇಂದು ಚಿಕ್ಕೋಡಿ ನಗರದಲ್ಲಿ ವಿವಿಧ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಜಿ ಹಾಗೂ ಚಿಕ್ಕೋಡಿ ಲೋಕಸಭೆ ಮಾಜಿ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಪಾಲ್ಗೊಂಡು, ದೇಶದ ವೀರ ಯೋಧರಿಗೆ ಕೃತಜ್ಞತೆ ಸಲ್ಲಿಸಿದರು.

ಈ ಯಾತ್ರೆಯಲ್ಲಿ ವೇಳೆ,ನಿವೃತ್ತ ಯೋಧರು, ವಕೀಲರು,ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರುಗಳ ನೇತೃತ್ವದಲ್ಲಿ “ವಂದೇ ಮಾತರಂ” ಜಯಘೋಷ ಮೊಳಗಿತು.
ಈ ಯಾತ್ರೆಯಲ್ಲಿ ರಾಜ್ಯಸಭಾ ಸದಸ್ಯರಾದ ಶ್ರೀ ಈರಣ್ಣ ಕಡಾಡಿ,ಶಾಸಕರಾದ ಶ್ರೀ ದುರ್ಯೋಧನ ಐಹೊಳೆ, ಶ್ರೀ ನಿಖಿಲ ಕತ್ತಿ,
ಮಾಜಿ ವಿ.ಪ ಸದಸ್ಯರಾದ ಶ್ರೀ ಮಹಾಂತೇಶ ಕವಟಗಿಮಠ, ಬಿಜೆಪಿ ಚಿಕ್ಕೋಡಿ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ ಅಪ್ಪಾಜಿಗೋಳ, ಮುಖಂಡರಾದ ಶ್ರೀ ಬಸವರಾಜ ಹುಂದ್ರಿ,ಶ್ರೀ ಮಹೇಶ ಭಾತೆ, ಶ್ರೀ ದುಂಡಪ್ಪಾ ಬೆಂಡವಾಡೆ, ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.