ಬೆಂಗಳೂರು :–
ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524 ಮೀಟರ್‌ಗೆ ಹೆಚ್ಚಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದೇವೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಹೇಳಿದ್ದಾರೆ.
ವಿಜಯಪುರ ಕೊಲ್ದಾರದಲ್ಲಿ ಮಾತನಾಡಿದ ಅವರು, ಈ ಬಗ್ಗೆ ಶಾಸಕರ ಜತೆ ಚರ್ಚೆ ಮಾಡಿದ್ದು, ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸಲು ತೀರ್ಮಾನಿಸಿದ್ದೇವೆ ಎಂದರು.
ಇತ್ತೀಚೆಗೆ ನಾನು ಹಾಗೂ ಸಿಎಂ ಕೇಂದ್ರದ ಮಂತ್ರಿಗಳನ್ನು ಭೇಟಿ ಮಾಡಿ ಅಧಿಸೂಚನೆ ಹೊರಡಿಸಲು ಒತ್ತಡ ಹಾಕಿದ್ದೇನೆ ಎಂದು ಅವರು ತಿಳಿಸಿದ್ದಾರೆ.