ಬೆಳಗಾವಿ :–
ಮಹಾಮಾರಿ ಕೊರೊನಾ ಸೋಂಕು ಗಡಿ ಜಿಲ್ಲೆ ಬೆಳ್ಳಾವಿಗೂ ಒಕ್ಕರಿಸಿದ್ದು, ಗರ್ಭಿಣಿಯೊಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕಿತ ಗರ್ಭಿಣಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆದರೆ ಅವರ ಆರೋಗ್ಯ ಸ್ಥಿತಿ ಗಂಭಿರವಾಗಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಬೆಳಗಾವಿ ಡಿಹೆಚ್‌ಒ ಈಶ್ವರ ಗಡಾದಿ, ಕೋವಿಡ್ ಸೋಂಕಿತ ಗರ್ಭಿಣಿ ಸ್ಥಿತಿ ಗಂಭೀರವಾಗಿದೆ.
ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದರು.
ಕೋವಿಡ್ ಬಗ್ಗೆ ಜಿಲ್ಲೆಯ ಜನರು ಭಯಪಡುವ ಅಗತ್ಯವಿಲ್ಲ. ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು. ಬಿಮ್ಸ್ ಆಸ್ಪತ್ರೆಯಲ್ಲಿ 10 ಬೆಡ್ ಗಳ ವಾರ್ಡ್ ಇದೆ.
ಬೆಳಗಾವಿ ಜಿಲ್ಲೆಯಲಿ ಚೆಕ್ ಪೋಸ್ಟ್ ತೆರೆಯುವ ಬಗ್ಗೆ ಸರ್ಕಾರದ ಮಾರ್ಗಸೂಚಿಗೆ ಕಾಯುತ್ತಿದ್ದೇವೆ. ಜನರು ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಮಾಸ್ಕ್ ಧರಿಸಬೇಕು ಎಂದು ಹೇಳಿದರು.