“ನದಿ ಪಾತ್ರದ ಜನರು ನದಿಗೆ ಇಳಿಯದಂತೆ ಚಿಕ್ಕೋಡಿ ತಾಲೂಕಾಡಳಿತ ಎಚ್ಚರಿಕೆ ನೀಡಿದೆ”

ಚಿಕ್ಕೋಡಿ :–

ಮಹಾರಾಷ್ಟ್ರ ದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿಗೆ 25,000 ಕ್ಯುಸೆಕ್‌ಗಿಂತಲೂ ಹೆಚ್ಚಿನ ಒಳ ಹರಿವು ಇದ್ದು,

ಹೀಗಾಗಿ ಹಿಪ್ಪರಗಿ ಜಲಾಶಯದಿಂದ 40,000 ಸಾವಿರ ಕ್ಯುಸೆಕ್ ನೀರನ್ನು ಹೊರ ಬಿಡಲಾಗಿದೆ. ಸದ್ಯಕ್ಕೆ ಯಾವುದೇ ಕೆಳ ಹಂತದ ಸೇತುವೆ ಮುಳುಗಡೆಯಾಗಿಲ್ಲ,

ನದಿ ಪಾತ್ರದ ಜನರು ನದಿಗೆ ಇಳಿಯದಂತೆ ಚಿಕ್ಕೋಡಿ ತಾಲೂಕಾಡಳಿತ ಎಚ್ಚರಿಕೆ ನೀಡಿದೆ. ನಿರಂತರ ಮಳೆಯಿಂದ ಕೊಲ್ಲಾಪುರದ ಪಂಚಗಂಗಾ ನದಿಯ ಒಳಹರಿವಿನ ಪ್ರಮಾಣ ಹೆಚ್ಚಳವಾಗಿ, ಹಲವು ಬ್ರಿಡ್ಜ್ ಕಮ್ ಬ್ಯಾರೇಜ್ ಮುಳುಗಡೆಯಾಗಿದೆ.

Share this post:

Leave a Reply

Your email address will not be published. Required fields are marked *