ಬೆಂಗಳೂರು :–
ರಾಜ್ಯದಲ್ಲಿ ಸದ್ಯಕ್ಕೆ ಮಾಸ್ಕಸ್ಕ್ ಕಡ್ಡಾಯ ಮಾಡಿಲ್ಲ ಎಂದು ಕೊರೋನಾ ಪ್ರಕರಣಗಳ ಹೆಚ್ಚಳದ ನಡುವೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಯಸ್ಸು ಆಗಿರೋರು, ಆರೋಗ್ಯ ಸಮಸ್ಯೆ ಇರುವವರು ಮಾಸ್ಕ್ ಹಾಕಬೇಕು. ಎಚ್ಚರಿಕೆಯಿಂದ ಇರಲು ಅಧಿಕಾರಿಗಳಿಗೆ ಹೇಳಿದ್ದೇನೆ ಎಂದು ಅವರು ಹೇಳಿದರು.
ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಟಾಸ್ಕ್ ಫೋರ್ಸ್ ಸಮಿತಿ ಜೊತೆ ಸಭೆ ಮಾಡಿ, ಎಲ್ಲದಕ್ಕೂ ತಯಾರಿರುವಂತೆ ಸೂಚನೆ ಕೊಟ್ಟಿದ್ದೇನೆ ಎಂದು ಸಿಎಂ ಹೇಳಿದರು.