ಬೆಂಗಳೂರು :–
ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿ, ಸಲಹೆ ಸೂಚನೆ ನೀಡಿದ ಸಿ ಎಂ.
“ಈ ಸಭೆಯ ಮುಖ್ಯಾಂಶಗಳು”
- ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆದರೂ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಬೇಕು.
- ರಾಜ್ಯದಲ್ಲಿ ಮೇ ತಿಂಗಳ ಬಳಿಕ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದೆ. ಈ ತಿಂಗಳು ಪ್ರತಿ ದಿನ ಸರಾಸರಿ 500 ಪರೀಕ್ಷೆ ನಡೆಸುತ್ತಿದ್ದೇವೆ.
- ಕಳೆದ 10 ದಿನಗಳಲ್ಲಿ 5 ಸಾವಿರ ಪರೀಕ್ಷೆ ನಡೆಸಲಾಗಿದ್ದು, 862 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 11ಸಾವು ಸಂಭವಿಸಿದೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ. ವಿವಿಧ ರೀತಿಯ ಅನಾರೋಗ್ಯಕ್ಕೆ ತುತ್ತಾಗಿದ್ದ ರೋಗಿಗಳು ಈ ಪ್ರಕರಣಗಳಲ್ಲಿ ಸಾವನ್ನಪ್ಪಿದ್ದಾರೆ. ಒಂದು ಪ್ರಕರಣದ ಆಡಿಟ್ ವರದಿ ಬರಬೇಕಾಗಿದೆ.
- ಕೋವಿಡ್ ಬಗ್ಗೆ ಯಾರೂ ಅನಗತ್ಯ ಗೊಂದಲ ಮೂಡಿಸಬಾರದು. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಪ್ರಕರಣಗಳನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂಬ ಸೂಚನೆ ನೀಡಲಾಗಿದೆ.
- ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.
- ಖಾಸಗಿ ಆಸ್ಪತ್ರೆಗಳಲ್ಲಿ ಅನಗತ್ಯವಾಗಿ ಕೋವಿಡ್ ಪರೀಕ್ಷೆ ಹೆಸರಿನಲ್ಲಿ ದುಬಾರಿ ಶುಲ್ಕ ವಿಧಿಸುತ್ತಿರುವ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು.