ವರದಿ : ಮಿಯಾಲಾಲ ಕಿಲ್ಲೇದಾರ
ಚಿಕ್ಕೋಡಿ :–
ಲೋಕಸಭಾ ಚುನಾವಣೆ-2024
ಚುನಾವಣಾ ಅಕ್ರಮ ತಡೆಗಟ್ಟಲು ಚೆಕಪೋಸ್ಟಗಳಲ್ಲಿ ತೀವ್ರ ನಿಗಾವಹಿಸಿ: ರಾಹುಲ ಶಿಂಧೆ
ಚಿಕ್ಕೊಡಿ(ಕರ್ನಾಟಕ ವಾರ್ತೆ) ಮಾ.19: ಲೋಕ ಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ಜರುಗಿಸಲು ಚಿಕ್ಕೋಡಿ ಲೊಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ನಿರ್ಮಿಸಲಾದ ಚೆಕಪೋಸ್ಟಗಳ ಅಧಿಕಾರಿ ಸಿಬ್ಬಂದಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಚಿಕ್ಕೋಡಿ ಲೋಕಸಭಾ ಚುನಾವಣಾಧಿಕಾರಿ ರಾಹುಲ ಶಿಂಧೆ ಸೂಚನೆ ನೀಡಿದರು.
ಚಿಕ್ಕೋಡಿ ಉಪ ವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಮನಗಳವಾರ (ಮಾ.19) ರಂದು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾದರಿ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿವ ಹಿನ್ನಲೆಯಲ್ಲಿ ಚಿಕ್ಕೊಡಿ ಲೋಕಸಭಾ ವ್ಯಾಪ್ತಿಯಲ್ಲಿ ನಿರ್ಮಿಸಲಾದ ಚೆಕಪೋಸ್ಟಗಳಲ್ಲಿ ನಿಯೋಜಿಸಲಾದ ಅಧಿಕಾರಿ, ಸಿಬ್ಬಂದಿಗಳು ಚುನಾವಣಾ ಆಯೋಗದ ನಿರ್ದೆಶಗಳನ್ವಯ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ದೂರುಗಳಿಗೆ ಆಸ್ಪದ ನೀಡದಂತೆ ಜಾಗರೂಕತೆಯಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು.
ಸಂಬಂಧಿತ ಅಧಿಕಾರಿಗಳು ನಿಯಮಿತವಾಗಿ ಚೆಕ ಪೋಸ್ಟಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು.
ಮಾದರಿ ನೀತಿ ಸಂಹಿತೆಗೆ ಸಂಬಂಧಿಸಿದಂತೆ ಚೆಕಪೊಸ್ಟಗಳಲ್ಲಿ ಜಪ್ತಿ ಮಾಡಲಾಗುವ ನಗದು, ಸರಕುಗಳ ವರದಿಯನ್ನು ನಿಗದಿತ ನಮೂನೆಯಲ್ಲಿ ಪ್ರತಿದಿನ ಒದಗಿಸಬೇಕು.
ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ದೂರುಗಳು ಬಂದಲ್ಲಿ ಸಂಬಂದಿಸಿದ ಅಧಿಕಾರಿಗಳು ಕೂಡಲೇ ಗಮನಹರಿಸಬೇಕು. ಈ ಕುರಿತು ಉದಾಸಿನ ಮನೋಭಾವ ತೋರಿದಲ್ಲಿ ಶಿಸ್ತುಕ್ರಮ ಜರುಗಿಸಲಾಗುವದು ಎಂದರು.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವದರಿಂದ ರಾಜಕೀಯ ಪಕ್ಷಗಳ ಬ್ಯಾನರ, ಗೋಡೆ ಬರಹಗಳನ್ನು ಕೂಡಲೇ ತೆರವುಗೊಳಿಸಬೇಕು. ಈ ಕುರಿತು ದೂರುಗಳು ಬಂದಲ್ಲಿ ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ನಿರ್ದಾಕಕ್ಷಿಣ್ಯವಾಗು ಕ್ರಮ ಜರುಗಿಸಲಾಗುವದು ಎಂದರು.
ಮತಯಂತ್ರಗಳ ರಾಂಡಮೈಸಗೆ ಸಂಬಂದಪಟ್ಟಂತೆ ಅಗತ್ಯದ ಪೋಲಿಸ ಸಿಬ್ಬಂದಿಗಳನ್ನು ನಿಯೋಜಿಸಬೇಕು.
ಸಭೆ ಸಮಾರಂಭಗಳ ಕುರಿತು ಅನುಮತಿಗಾಗಿ ಸುವಿಧಾ ವ್ಯವಸ್ಥೆಯನ್ನು ಪರಿಚಯಿಸಲಾಗಿದ್ದು. ಈ ಸುವಿಧಾ ವ್ಯವಸ್ಥೆಯ ಬಗ್ಗೆ ಕಾರ್ಯನಿರ್ವಹಿಸುವ ಅಧಿಕಾರಿ ಸಿಬ್ಬಂದಿಗಳಿಗೆ ಸೂಕ್ತ ತಿಳುವಳಿಕೆ ಹೊಂದಬೇಕು. ಈ ಕುರಿತು ತಹಶೀಲ್ದಾರರು ನಿಯಮಿತವಾಗಿ ಭೇಟಿ ನೀಡಿ ಪರಿಶೀಲಿಸಬೇಕು. ಮೆರವಣಿಗೆ ಕೋರಿ ಸಲ್ಲಿಸುವ ಅರ್ಜಿಗಳಿಗೆ ಸಂಬಂಧಿಸದಂತೆ ಅಗತ್ಯದ ರೂಪುರೇಷೆಗಳನ್ನು ಮುಂಚಿತವಾಗಿಯೇ ಸಿದ್ದಪಡಿಸಿಟ್ಟುಕೊಳ್ಳುವಂತೆ ತಿಳಿಸಿದರು.
ಲೋಕಸಭಾ ಚುನಾವಣೆಯಲ್ಲಿ ಎಲ್ಲ ಅಧಿಕಾರಿಗಳು ಒಂದು ತಂಡವಾಗಿ ಕಾರ್ಯ ನಿರ್ವಹಿಸುವದರ ಮೂಲಕ ಯಶಸ್ವಿಗೊಳಿಸಬೇಕು.ಚುನಾವಣಾ ಮಾರ್ಗಸೂಚಿಗಳನ್ವಯ ಯಾವುದೇ ದೂರುಗಳಿಗೆ ಆಸ್ಪದ ನೀಡದೆ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಶ್ರಮಿಸುವಂತೆ ಚಿಕ್ಕೊಡಿ ಲೋಕಸಭಾ ಚುನಾವಣಾಧಿಕಾರಿ ರಾಹುಲ ಶಿಂಧೆ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ಉಪಕಾರ್ಯದರ್ಶಿ ಬಸವರಾಜ ಅಡವಿಮಠ, ಉಪವಿಭಾಗಾಧಿಕಾರಿ ಶ್ರೀಮತಿ ಮೆಹಬೂಬಿ ಸೇರಿದಂತೆ ವಿವಿಧ ಸಮಿತಿಗಳ ನೋಡೆಲ್ ಅಧಿಕಾರಿಗಳು ಉಪಸ್ಥಿತರಿದ್ದರು.
+ There are no comments
Add yours