ರಾಯಚೂರು :–
ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ, ಸತೀಶ ಅಣ್ಣಾ ಜಾರಕಿಹೊಳಿ
ಅವರು ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ, ಅಧಿಕಾರಿಗಳಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದು, ಅಗತ್ಯ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಎನ್.ಎಸ್. ಬೋಸರಾಜು, ಶಾಸಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.