ಬೆಂಗಳೂರು :–
ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಫಲಾನುಭವಿಗಳ ಪರಿಷ್ಕರಣೆ ಮಾಡುವುದಿಲ್ಲ, ಚಾಲ್ತಿಯಲ್ಲಿರುವ ವ್ಯವಸ್ಥೆಯನ್ನು ಮುಂದುವರೆಸಲಾಗುವುದು.
ಎಂದು ಬೆಂಗಳೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಸ್ಪಷ್ಟಪಡಿಸಿದ್ದಾರೆ.
ಗೃಹಲಕ್ಷ್ಮಿ ಹಣ ವಿಳಂಬದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಣ ಬಿಡುಗಡೆಗೆ ಯಾವುದೇ ತಾಂತ್ರಿಕ ಸಮಸ್ಯೆ ಇಲ್ಲ,
ಏಪ್ರಿಲ್ ತಿಂಗಳವರೆಗೂ ಹಣ ಕ್ಲಿಯರ್ ಆಗಿದೆ. ಮೇ ಮತ್ತು ಜೂನ್ ತಿಂಗಳ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.





