“ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲು ಅರ್ಜಿ ಆಹ್ವಾನ”

ಬೆಂಗಳೂರು :–

ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಿದೆ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಲು ನೆರವಾಗುವ ಈ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿದೆ.
ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉಚಿತವಾಗಿ ಹೊಲಿಗೆಯಂತ್ರಗಳನ್ನು ವಿತರಿಸುವ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿಸುವ ಉದ್ದೇಶದಿಂದ ಸರ್ಕಾರ ಈ ಯೋಜನೆಯ್ನು ಜಾರಿಗೊಳಿಸಿದೆ. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಬಡ ಕುಟುಂಬದ ಜನರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಸ್ವಾವಲಂಬಿ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಮಹಿಳೆಯರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಸರ್ಕಾರ ಹಲವಾರು ಯೋಜನೆಗಳನ್ನು ನಡೆಸುತ್ತಿದೆ. ಈ ಉಚಿತ ಹೊಲಿಗೆ ಯಂತ್ರ ಯೋಜನೆಯೂ ಒಂದು. ಈ ಯೋಜನೆಯಡಿ ಬಡ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ನೀಡಲಾಗುತ್ತಿದೆ. ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ.

ನೀವು ಕೂಡ ಉಚಿತ ಹೊಲಿಗೆ ಯಂತ್ರ ಯೋಜನೆಯ ಲಾಭ ಪಡೆಯಲು ಯೋಜನೆಗೆ ಸಂಬಂಧಿಸಿದ ಕೆಲವು ಮುಖ್ಯ ಮಾಹಿತಿಗಳನ್ನ ನೆನಪಲ್ಲಿಡಿ ಉಚಿತ ಹೊಲಿಗೆ ಯಂತ್ರ ಪಡೆಯಲು ಬಳಸುವ ಮಹಿಳೆಯರ ವಯಸ್ಸು 20 ರಿಂದ 40 ವರ್ಷಗಳ ನಡುವೆ ಇರಬೇಕು.
ಈ ಯೋಜನೆಯ ಲಾಭ ಪಡೆಯುವ ಕೂಲಿ ಕಾರ್ಮಿಕರ ಪತಿಯ ವಾರ್ಷಿಕ ಆದಾಯ ರೂ.12 ಸಾವಿರ ಮೀರಬಾರದು. ವಿಧವೆ ಮತ್ತು ಅಂಗವಿಕಲ ಮಹಿಳೆಯರು ಸಹ ಉಚಿತ ಹೊಲಿಗೆ ಯಂತ್ರ ಯೋಜನೆಯ ಲಾಭ ಪಡೆಯಬಹುದು. ಅಭ್ಯರ್ಥಿಗಳು ನಿರುದ್ಯೋಗಿಗಳಾಗಿರಬೇಕು. ಅಥವಾ ಗ್ರಾಮೀಣ ಪ್ರದೇಶದಲ್ಲಿ ರೂ. 1.5 ಲಕ್ಷ, ನಗರ ಪ್ರದೇಶಗಳಲ್ಲಿ ರೂ. 2 ಲಕ್ಷಕ್ಕಿಂತ ಕಡಿಮೆ ವಾರ್ಷಿಕ ಆದಾಯ ಹೊಂದಿರಬೇಕು.

ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
ಆಧಾರ್ ಕಾರ್ಡ್
ವಯಸ್ಸಿನ ಪ್ರಮಾಣ ಪತ್ರ
ಆದಾಯ ಪ್ರಮಾಣ ಪತ್ರ
ಗುರುತಿನ ಚೀಟಿ
ಅಂಗವೈಕಲ್ಯವಿದ್ದಲ್ಲಿ ವೈದ್ಯಕೀಯ ಪ್ರಮಾಣ ಪತ್ರ
ನಿರ್ಗತಿಕ ವಿಧವೆ ಮಹಿಳೆಯರಿಗೆ ವಿಧವಾ ಪ್ರಮಾಣ ಪತ್ರ

ಸಮುದಾಯ ಪ್ರಮಾಣ ಪತ್ರ

ಮೊಬೈಲ್ ಸಂಖ್ಯೆ ಹಾಗೂ ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಹೊಂದಿರಬೇಕು.

ಅರ್ಜಿ ಸಲ್ಲಿಸಲು ಗ್ರಾಮವನ್ ಬೆಂಗಳೂರು ವನ್ ಸೇವ ಸಿಂಧು ಕೇಂದ್ರಗಳಿಗೆ ಭೇಟಿ ನೀಡಿ, ನೀವು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಲು ಇಚ್ಛಿಸಿದ್ರೆ, ಅಧಿಕೃತ ವೆಬ್ಸೈಟ್ ಸೆವಾ ಸಿಂಧು ಗೆ ಭೇಟಿ ನೀಡಿ.

Share this post:

Leave a Reply

Your email address will not be published. Required fields are marked *

Category
Lorem ipsum dolor sit amet, consectetur adipiscing elit eiusmod tempor ncididunt ut labore et dolore magna

You cannot copy content of this page