“ಲೋಕಸಭಾ ಚುನಾವಣೆ-2024ಚುನಾವಣಾ ಕರ್ತವ್ಯವನ್ನು ಜಾಗರೂಕತೆ, ಜವಾಬ್ದಾರಿಯುತವಾಗಿ ನಿರ್ವಹಿಸಿ”-ರಾಹುಲ ಶಿಂಧೆ

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಚಿಕ್ಕೋಡಿ(ಎ.6) :–

ಪ್ರಸಕ್ತ ಲೋಕಸಭಾ ಚುನಾವಣೆ ಘೋಷಣೆಯಾದ ಹಿನ್ನಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳು ತಮ್ಮ ಕರ್ತವ್ಯವಗಳನ್ನು ಜಾಗರೂಕತೆಯಿಂದ ಜವಾಬ್ದಾರಿಯುವಾಗಿ ನಿರ್ವಹಿಸಬೇಕು ಎಂದು ಜಿ.ಪಂ. ಸಿ.ಇ.ಓ. ಹಾಗೂ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿಯು ಆದ ರಾಹುಲ ಶಿಂಧೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಚಿಕ್ಕೋಡಿ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ (ಎ.6) ರಂದು ಜರುಗಿದ ಸಹಾಯಕ ಚುನಾವಣಾಧಿಕಾರಿಗಳು, ವಿವಿಧ ಸಮಿತಿಗಳ ನೊಡೆಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸಕ್ತ ಚುನಾವಣೆ ಕಾರ್ಯಗಳಿಗೆ ನಿಯೋಜಿತ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಚುನಾವಣಾ ಮಾರ್ಗಸೂಚಿಗಳನ್ವಯ ಲೋಪಗಳಿಗೆ ಆಸ್ಪದ ನೀಡದಂತೆ ಕಾರ್ಯನಿರ್ವಹಿಸಬೇಕು ಎಂದರು.

ಚಿಕ್ಕೋಡಿ ಲೋಕಸಭಾ ಮತ ಕ್ಷೇತ್ರದ ವ್ಯಾಪ್ತಿಯಲ್ಲಿನ ಸೂಕ್ಷö್ಮ ಹಾಗೂ ಕಡಿಮೆ ಮತದಾನವಾದಂತಹ ಮತಗಟ್ಟೆಗಳಲ್ಲಿ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಆಯೋಜಿಸುವ ಮೂಲಕ ಮತದಾರರಲ್ಲಿ ಆತ್ಮ ವಿಶ್ವಾಸ ಹೆಚ್ಚಿಸುವ ಕಾರ್ಯ ಮಾಡಬೇಕು. ಚುನಾವಣೆಗಾಗಿ ಸ್ಥಾಪಿಸಲಾಗುವ ವಿಶೇಷ ಮತಗಟ್ಟೆ ಹಾಗೂ ಸಖಿ ಮತಗಟ್ಟೆಗಳ ವರದಿಯನ್ನು ನೀಡಬೇಕು. ಎಲ್ಲ ಮತಗಟ್ಟೆಗಳಲ್ಲಿ ಕಾಯುವಿಕೆ ಕೇಂದ್ರ, ಶೌಚಾಲಯ, ಬೆಳಕಿನ ಹಾಗೂ ಕುಡಿಯುವ ನೀರಎಂಭೈತ್ತೆದು ಮಾಡಿಟ್ಟುಕೊಳ್ಳಬೇಕು.

ಚೆಕಪೋಸ್ಟಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿ ಸಿಬ್ಬಂದಿಗಳು ಅತೀ ಜಾಗರೂಕತೆಯಿಂದ ಕಾರ್ಯ ನಿರ್ವಹಿಸಬೇಕು. ಚುನಾವಣಾ ಅಕ್ರಮಗಳನ್ನು ತಡೆಗಟ್ಟುವ ಹಿನ್ನಲೆಯಲ್ಲಿ ನಿರ್ಮಿಸಲಾದ ಚೆಕ ಪೋಸ್ಟಗಳ ಮೂಲಕ ಹಾದು ಹೋಗುವ ಪ್ರತಿ ವಾಹನವನ್ನು ಕುಲಂಕೂಷವಾಗಿ ಪರಿಶೀಲಿಸಬೇಕು. ಚೆಕಪೋಸ್ಟನಲ್ಲಿ ವಾಹನಗಳ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಬೇಕು. ಚೆಕ್ ಪೋಸ್ಟಗಳಲ್ಲಿ ವಶಕ್ಕೆ ಪಡೆಯಲಾದ ನಗದು ಹಾಗೂ ಸರಕುಗಳ ನಿಖರವಾದ ವರದಿಯನ್ನು ಕಾಲಮಿತಿಯೊಳಗಾಗಿ ಸಲ್ಲಿಸಬೇಕು.

ಚುನಾವಣಾ ಆಯೋಗವು ವಿಕಲಚೇತನ ಮತದಾರರಿಗೆ ಹಾಗೂ ಎಂಭೈತ್ತೆ ವರ್ಷ ಮೇಲ್ಪಟ್ಟ ವಯೋವೃದ್ಧರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಿದ್ದು ಈ ನಿಟ್ಟಿನಲ್ಲಿ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಗುರುತಿಸಲಾದ ಮತದಾರರಿಗೆ ಆಯೋಗದ ನಿರ್ದೇಶನದಂತೆ ಮನೆಯಿಂದಲೆ ಮತದಾನಕ್ಕೆ ಅವಕಾಶ ಕಲ್ಪಿಸಬೇಕು. ಅಂಚೆ ಮತಪತ್ರಗಳ ನಿರ್ವಹಣೆಯಲ್ಲಿ ಯಾವುದೇ ಲೋಪಗಳು ಆಗದಂತೆ ನಿಗಾವಹಿಸಬೇಕು.

ಸುಗಮ ಹಾಗೂ ಪಾರದರ್ಶಕ ಚುನಾವಣೆಗೆ ವಿವಿಧ ಹಂತದ ತರಬೇತಿಗಳನ್ನು ಆಯೋಜಿಸಲಾಗುತ್ತಿದೆ. ವಿವಿಧ ಹಂತಗಳಲ್ಲಿ ಜರುಗುವ ತರಬೇತಿಗಳು ಅಚ್ಚುಕಟ್ಟಾಗಿ ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ಜರುಗಿಸಬೇಕು. ಸಿವಿಜಿಲ್ ಆಪ್ ಹಾಗೂ ಚುನಾವಣಾ ಸಂಬAಧಿಸಿದ ದೂರುಗಳನ್ನು ಕಾಲಮಿತಿಯೊಳಗಾಗಿ ವಿಲೇ ಮಾಡುವದರ ಜೊತೆಗೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗಿರುವದು ಕಂಡುಬAದಲ್ಲಿ ಕೂಡಲೇ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಚುನಾವಣೆ ಭದ್ರತೆಗೆ ಆಗಮಿಸುವ ಕೇಂದ್ರ ಭದ್ರತಾ ತಂಡಗಳಿಗೆ ಅಗತ್ಯದ ವಸತಿ, ಊಟದ ವ್ಯವಸ್ಥೆ ಒದಗಿಸುವ ನಿಟ್ಟಿನಲ್ಲಿ ಸಂಬAಧಿಸಿದ ಅಧಿಕಾರಿಗಳು ಈಗಿನಿಂದಲೆ ಕ್ರಮ ವಹಿಸಿ ಅಗತ್ಯದ ವ್ಯವಸ್ಥೆ ಮಾಡಿಟ್ಟುಕೊಳ್ಳಬೇಕು.

ಚುನಾವಣೆಯನ್ನು ಎಲ್ಲ ಅಧಿಕಾರಿಗಳು ಒಂದು ತಂಡವಾಗಿ ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವದರ ಮೂಲಕ ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ಶಾಂತ ಹಾಗೂ ಪಾರದರ್ಶಕ ಚುನಾವಣೆ ಜರುಗಿಸಲು ಮುಂದಾಗುವAತೆ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ ಶಿಂಧೆ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಜಿ.ಪಂ. ಉಪಕಾರ್ಯದರ್ಶಿ ಬಸವರಾಜ ಅಡವಿಮಠ, ಚಿಕ್ಕೋಡಿ ಉಪವಿಭಾಗಾಧಿಕಾರಿ ಶ್ರೀಮತಿ ಮೆಹಬೂಬಿ, ಡಿವೈಎಸ್‌ಪಿ ಗೋಪಾಲಕೃಷ್ಣ ಗೌಡರ, ಸಹಾಯಕ ಚುನಾವಣಾಧಿಕಾರಿಗಳು, ತಹಶೀಲ್ದಾರರು, ವಿವಿಧ ಸಮಿತಿಗಳ ನೋಡೆಲ್ ಅಧಿಕಾರಿಗಳು ಹಾಜರಿದ್ದರು.


Share with Your friends

You May Also Like

More From Author

+ There are no comments

Add yours