ವರದಿ : ಮಿಯಾಲಾಲ ಕಿಲ್ಲೇದಾರ
ಚಿಕ್ಕೋಡಿ :–
ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಅಥಣಿ ವಿಧಾನಸಭೆ ಕ್ಷೇತ್ರದ ಸಂಕೋನಟ್ಟಿ, ಕೋಕಟನೂರ ಗ್ರಾಮದಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ಶ್ರೀ ಅಣ್ಣಾಸಾಹೇಬ ಜೊಲ್ಲೆ ಅವರ ಪರವಾಗಿ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಕು. ಬಸವಪ್ರಸಾದ ಜೊಲ್ಲೆ ಯವರು ಪ್ರಚಾರ ಕೈಗೊಂಡು ಮತಯಾಚನೆ ಮಾಡಿದರು.
ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಕೇಂದ್ರ ಸರ್ಕಾರದ ಹಲವಾರು ಯೋಜನೆಗಳ ಲಾಭ ಪಡೆದ ಬಡವರ ಜೀವನ ಸುಗಮವಾಗಿದೆ. ಶ್ರೀ ನರೇಂದ್ರ ಮೋದಿ ಯವರು ಮೂರನೇ ಬಾರಿಯೂ ಪ್ರಧಾನಿಯಾಗಬೇಕು. ಚಿಕ್ಕೋಡಿ ಕ್ಷೇತ್ರದ ಅಭಿವೃದ್ದಿಗಾಗಿ ಎರಡನೇ ಬಾರಿ ಶ್ರೀ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಬಹುಮತದಿಂದ ಆರಿಸಿ ತರಲು ನಾವೆಲ್ಲರೂ ಮಾಡೋಣವೆಂದು ಒಗ್ಗಟ್ಟಾಗಿ ಕೆಲಸ ಮಾಡೋಣ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಗಣ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
+ There are no comments
Add yours