“ಅತ್ಯಂತ ದುರ್ಬಲ ಆರ್ಥಿಕತೆ ಹೊಂದಿದ್ದ ಭಾರತ ಇಂದು ಜಗತ್ತಿನ ಐದನೇ ಅತೀ ದೊಡ್ಡ ಆರ್ಥಿಕ ವ್ಯವಸ್ಥೆ ಹೊಂದಿದ ರಾಷ್ಟ್ರವಾಗಿ ಹೊರಹೊಮ್ಮಿದೆ” : ಅಣ್ಣಾಸಾಹೇಬ ಜೊಲ್ಲೆ

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ
ಚಿಕ್ಕೋಡಿ :–

ಚಿಕ್ಕೋಡಿ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಐನಾಪೂರ ಪಟ್ಟಣದಲ್ಲಿ ಭಾರತೀಯ ಜನತಾ ಪಾರ್ಟಿ ಕಾಗವಾಡ ಮಂಡಲ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭಾಗವಹಿಸಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.

ದೇಶದಲ್ಲಿ ಕಳೆದ ಹತ್ತು ವರ್ಷದಲ್ಲಿ ಸಾಕಷ್ಟು ಬದಲಾವಣೆ ಕಂಡು ಬಂದಿದ್ದು, ಅತ್ಯಂತ ದುರ್ಬಲ ಆರ್ಥಿಕತೆ ಹೊಂದಿದ್ದ ಭಾರತ ಇಂದು ಜಗತ್ತಿನ ಐದನೇ ಅತೀ ದೊಡ್ಡ ಆರ್ಥಿಕ ವ್ಯವಸ್ಥೆ ಹೊಂದಿದ ರಾಷ್ಟ್ರವಾಗಿ ಹೊರಹೊಮ್ಮಿದೆ. ಸರಕಾರದ ಪ್ರತಿಯೊಂದು ಯೋಜನೆಗಳು ರಾಷ್ಟ್ರದ ಕಟ್ಟ ಕಡೆಯ ಪ್ರಜೆಗೂ ತಲುಪಿದಾಗ ಮಾತ್ರ ಸದೃಢ ರಾಷ್ಟ್ರ ನಿರ್ಮಿಸಲು ಸಾಧ್ಯ ಎಂಬ ಪರಿಕಲ್ಪನೆಯೊಂದಿಗೆ ರಾಷ್ಟ್ರವನ್ನು ಮುನ್ನಡೆಸುತ್ತಿರುವ ಪ್ರಧಾನಮಂತ್ರಿ ಶ್ರೀ ನರೆಂದ್ರ ಮೋದಿಜಿ ಅವರ ಕೈಬಲಪಡಿಸಲು ನನಗೆ ಬೆಂಬಲ ನೀಡಿ ಪ್ರಚಂಡ ಬಹುಮತದಿಂದ ಗೆಲ್ಲಿಸಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕರಾದ ಶ್ರೀಮಹೇಶ ತೆಂಗಿನಕಾಯಿ, ಮಾಜಿ ಸಚಿವರಾದ ಶ್ರೀ ಶ್ರೀಮಂತ ಪಾಟೀಲ,ಲೋಕಸಭಾ ಜಿಲ್ಲಾ ಪ್ರಭಾರಿಗಳಾದ ಶ್ರೀ ಚಂದ್ರಶೇಖರ ಕವಟಗಿ,ಜಿಲ್ಲಾ ಅಧ್ಯಕ್ಷರಾದ ಶ್ರೀ ಸತೀಶ ಅಪ್ಪಾಜಿಗೋಳ,ಮಾಜಿ ಜಿಲ್ಲಾಧ್ಯಕ್ಷರಾದ ಶ್ರೀ ರಾಜೇಶ ನೇರ್ಲಿ,ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ನಿಂಗಪ್ಪ ಖೋಕಲೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಅಮೃತ ಕುಲಕರ್ಣಿ, ಬಿಜೆಪಿ ಮುಖಂಡರಾದ ಶ್ರೀ ಶ್ರೀನಿವಾಸ ಪಾಟೀಲ, ಕಾಗವಾಡ ಮಂಡಲ ಪ್ರಭಾರಿಗಳಾದ ಶ್ರೀ ಪ್ರಭಾಕರ ಚವ್ಹಾಣ,ಜಿಲ್ಲಾ ಕಾರ್ಯದರ್ಶಿ ದೀಪಕ ಪಾಟೀಲ,ಶ್ರೀ ಶಿವಾನಂದ ಪಾಟೀಲ, ಶ್ರೀ ಅಭಯ ಅಕಿವಾಟೆ, ಮಂಡಲ ಅಧ್ಯಕ್ಷರಾದ ಶ್ರೀ ತಮ್ಮಣ್ಣ ಪಾರಶೆಟ್ಟಿ,ಶ್ರೀ ದಾದಾ ಪಾಟೀಲ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.


Share with Your friends

You May Also Like

More From Author

+ There are no comments

Add yours