ವರದಿ : ಮಿಯಾಲಾಲ ಕಿಲ್ಲೇದಾರ
ಚಿಕ್ಕೋಡಿ :–
ಲೋಕಸಭೆ ಚುನಾವಣೆ – 2024 ಭಾರತೀಯ ಜನತಾ ಪಕ್ಷದ ಅಧಿಕೃತ ಅಭ್ಯರ್ಥಿಯಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ ಅವರ ಪ್ರಚಾರಾರ್ಥ ಕೇಂದ್ರೀಯ ಸಚಿವರಾದ ಶ್ರೀ ಪ್ರಲ್ಹಾದ ಜೋಶಿ ಸದಲಗಾ ಪಟ್ಟಣಕ್ಕೆ.
ಮೇ 07 ರಂದು ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಬುಧವಾರ ದಿನಾಂಕ 24-04-2024 ರಂದು ಸಂಜೆ 5.00 ಗಂಟೆಗೆ ಸದಲಗಾ ಪಟ್ಟಣದಲ್ಲಿ ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಶ್ರೀ ಪ್ರಲ್ಹಾದ ಜೋಶಿ ಜಿ ಅವರ ಅಧ್ಯಕ್ಷತೆಯಲ್ಲಿ ಚಿಕ್ಕೋಡಿ ಲೋಕಸಭೆ ಭಾರತೀಯ ಜನತಾ ಪಕ್ಷದ ಅಧಿಕೃತ ಅಭ್ಯರ್ಥಿಯಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ ಅವರ ಪರವಾಗಿ ಬಹಿರಂಗ ಸಭೆಯನ್ನು ಆಯೋಜಿಸಲಾಗಿದೆ.
ಈ ಸಭೆಯಲ್ಲಿ ಜಿಲ್ಲೆಯ ಸಂಸದರು,ಮಾಜಿ ಸಂಸದರು,ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಂಡಲ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಪುರಸಭೆ ಅಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ಪಕ್ಷದ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿರುವರು.
ಸ್ಥಳ – ಹಳೆ ಬಸ್ ನಿಲ್ದಾಣ, ದರ್ಗಾ ಚೌಕ್ ಸದಲಗಾ. 24-04-2024 ರಂದು ಸಂಜೆ 5.00 ಗಂಟೆಗೆ
+ There are no comments
Add yours