ವರದಿ : ಮಿಯಾಲಾಲ ಕಿಲ್ಲೇದಾರ
ಚಿಕ್ಕೋಡಿ (ಮೇ.1) :–
ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿ.ಪಂ. ಸಿ.ಇ.ಓ ಆದಂತಹ ರಾಹುಲ ಶಿಂಧೆ ಅವರು ಬುಧವಾರ (ಮೇ.1) ರಂದು ಅಂಚೆ ಮತದಾನದ ಮೂಲಕ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಲೋಕಸಭಾ ಚುನಾವಣೆ 2024ರ ಹಿನ್ನಲೆಯಲ್ಲಿ ಅಗತ್ಯ ಸೇವೆಗಳಡಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ ಸಿಬ್ಬಂದಿಗಳಿಗೆ ಅಂಚೆ ಮತದಾನದ ಮೂಲಕ ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.
ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿನ ಅಗತ್ಯ ಸೇವೆಗಳಡಿ ಬರುವಂತಹ ಅಧಿಕಾರಿ, ಸಿಬ್ಬಂದಿಗಳಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಚಿಕ್ಕೋಡಿ ತಹಶೀಲ್ದಾರ ಕಚೇರಿಯಲ್ಲಿನ ಕೋರ್ಟ ಹಾಲನಲ್ಲಿ ವ್ಯವಸ್ಥೆ ಮಾಡಲಾಗಿರುತ್ತದೆ.
ಮೇ 1 ರಿಂದ 3 ರ ವರೆಗೆ ಅಗತ್ಯ ಸೇವೆಗಳಡಿ ಬರುವ ನೌಕರರು ಚಿಕ್ಕೋಡಿ ತಹಶೀಲ್ದಾರ ಕಚೇರಿಯ ಕೋರ್ಟ ಹಾಲನಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಗೆ ಮುಂಜಾನೆ 9 ಗಂಟೆಯಿಂದ ಸಾಯಂಕಾಲ 5 ಗಂಟೆಯೊಳಗಾಗಿ ಆಗಮಿಸಿ ತಪ್ಪದೇ ಮತ ಚಲಾಯಿಸುವಂತೆ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ ಶಿಂಧೆ ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಚಿಕ್ಕೋಡಿ ಉಪವಿಭಾಗಾಧಿಕಾರಿಗಳಾದ ಶ್ರೀಮತಿ ಮೆಹಬೂಬಿ ಸೇರಿದಂತೆ ತರಬೇತಿಗೆ ಆಗಮಿಸಿದ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಅಂಚೆ ಮತದಾನದ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿದರು. ಚಿಕ್ಕೋಡಿ ತಹಶೀಲ್ದಾರ ಚಿದಂಬರ ಕುಲಕರ್ಣಿ ಉಪಸ್ಥಿತರಿದ್ದರು.
+ There are no comments
Add yours