ಬೆಂಗಳೂರು :–
ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿ, ರೈತ ವಿರೋಧಿ ನೀತಿಯ ವಿರುದ್ಧ 10 ಕೇಂದ್ರ ಟ್ರೇಡ್ ಯೂನಿಯನ್‌ಗಳು ನಾಳೆ ಜುಲೈ 9 ರಂದು ಭಾರತ್ ಬಂದ್‌ಗೆ ಕರೆ ನೀಡಿವೆ.
ಹೀಗಾಗಿ ಕರ್ನಾಟಕದಲ್ಲಿ ನಾಳೆ ಬ್ಯಾಂಕಿಂಗ್, ವಿಮೆ ಮತ್ತು ಅಂಚೆ ಸೇವೆಯಲ್ಲಿ ವ್ಯತ್ಯಯ ಕಂಡುಬರಲಿದೆ. ಸೇವೆಗಳನ್ನು ಸ್ಥಗಿತಗೊಳಿಸುವ ಬಗ್ಗೆ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಯಾವುದೇ ಅಧಿಕೃತ ಸೂಚನೆ ನೀಡಿಲ್ಲವಾದರೂ,
ಓಡಾಟ ಕೊಂಚ ಏರುಪೇರಾಗುವ ಸಾಧ್ಯತೆ ಇದೆ. ಕರ್ನಾಟಕ
ಸರ್ಕಾರ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿಲ್ಲ.





