“ನಿಪ್ಪಾಣಿ ತಾಲೂಕಿಗೆ ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರ” : ಶಾಸಕಿ ಶಶಿಕಲಾ ಜೊಲ್ಲೆ

ನಿಪ್ಪಾಣಿ :–

ತಾಲೂಕಿಗೆ ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರಾಗಿದ್ದು, ಈ ವಿಶೇಷ ತಿಳಿಸುವುದಕ್ಕೆ ಅತೀವ ಸಂತಸವಾಗುತ್ತಿದೆ‌. ಮಾಜಿ ಸಚಿವರು ಹಾಗೂ ನಿಪ್ಪಾಣಿ ಶಾಸಕರರಾದ ಶಶಿಕಲಾ ಜೊಲ್ಲೆ ಮಾಹಿತಿ.

ನಿಪ್ಪಾಣಿ ತಾಲೂಕಿನಲ್ಲಿ ಈ ಮಾದರಿ ಶಾಲೆಯು ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ತನ್ನ ಕಾರ್ಯಚಟುವಟಿಕೆಗಳನ್ನು ಪ್ರಾರಂಭಿಸಲು ಸಿದ್ಧವಾಗಿದೆ. ಇದರಿಂದಾಗಿ ತಾಲೂಕಿನ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ಮೂಲಭೂತ ಸೌಲಭ್ಯಗಳು ಲಭ್ಯವಾಗಲಿದೆ.ನನ್ನ ಕ್ಷೇತ್ರದಳ್ಳಿ ಯಾವ ವಿಧ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಶಾಲೆ ಪ್ರಾರಂಭಿಸಲಾಗುವುಡು ಎಂದು ಪತ್ರಿಕಾ ಪ್ರಕಟಣೆಯಲ್ಲಿ ನಿಪ್ಪಾಣಿ ಶಾಸಕಾರಾದ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಶಾಲೆಯನ್ನು ಪ್ರಾರಂಭಿಸಲು ಸಹಕರಿಸಿದ ಸರ್ಕಾರಕ್ಕೆ ಹಾಗೂ ನಮ್ಮ ಪಕ್ಕದ ಹಿರಿಯ ನಾಯಕರಿಗೆ ಎಲ್ಲರಿಗೂ ಧನ್ಯವಾದಗಳು.

Share this post:

Leave a Reply

Your email address will not be published. Required fields are marked *

You cannot copy content of this page