ಹುಬ್ಬಳ್ಳಿ :–
ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿಗೆ ವಿಷ ಹಾಕಿ ಕೊಲೆ ಮಾಡಲು ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ.

ವಿಷಯದ ಬಗ್ಗೆ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಪ್ರತಿಕ್ರಿಯಿಸಿ, ಸ್ವತಃ ಜಯಮೃತ್ಯುಂಜಯ ಸ್ವಾಮೀಜಿ ಈ ಶಂಕೆ ಯನ್ನು ತಮ್ಮ ಮುಂದೆ ವ್ಯಕ್ತಪಡಿಸಿದರು ಎಂದು ಹೇಳಿದರು.
ಶಾಸಕ ವಿಜಯನಾಂದ್ ಕಾಶಪ್ಪನವರ್ ನೇಮಿಸಿದ ಕೆಲಸದವರು ಮಠದ ಅಡುಗೆ ಮನೆಗೆ ಹೋಗಿ ಬಂದ ನಂತರ ಸ್ವಾಮಿ ಪ್ರಸಾದ ಸ್ವೀಕರಿಸಿದ್ದು,
ತದನಂತರ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ ಎಂದು ಸ್ವಾಮೀಜಿ ತಮಗೆ ಹೇಳಿದ್ದಾರೆ ಎಂದು ಅವರು ಹೇಳಿದರು.





