ಬೆಂಗಳೂರು :–
ಉತ್ತರ ಪ್ರದೇಶದ ಕೌಶಂಬಿಯಲ್ಲಿ ಮಹಿಳೆಯೊಬ್ಬಳು ತನ್ನ ಪತಿ, ಇಬ್ಬರು ಮಕ್ಕಳು ಸೇರಿದಂತೆ ಕುಟುಂಬದ ಒಟ್ಟು 10 ಸದಸ್ಯರನ್ನು ಹಿಟ್ಟಿನಲ್ಲಿ ವಿಷ ಬೆರೆಸಿ ಕೊಲ್ಲಲು ಯತ್ನಿಸಿದ್ದಾಳೆ ಎಂದು ಆರೋಪಿಸಲಾಗಿದೆ.
ಹಿಟ್ಟಿನಿಂದ ಕೆಟ್ಟ ವಾಸನೆ ಬರಲು ಪ್ರಾರಂಭಿಸಿದಾಗ ಕುಟುಂಬಸ್ಥರಿಗೆ ಅನುಮಾನ ಬಂದಿದೆ.
ನಂತರ ಮಹಿಳೆ ಅವರನ್ನು ಕೊಂದು “ಆಸ್ತಿಯನ್ನು ಮಾರಾಟ ಮಾಡಲು ಬಯಸಿದ್ದಾಗಿ” ಒಪ್ಪಿಕೊಂಡಿದ್ದಾಳೆ.
ಸದರಿ ಪ್ರಕರಣದಲ್ಲಿ ಮಹಿಳೆ, ಆಕೆಯ ತಂದೆ ಮತ್ತು ಸಹೋದರನನ್ನು ಬಂಧಿಸಲಾಗಿದೆ.