“ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಜಿಪಂ ಸಿಇಒ ರಾಹುಲ್ ಶಿಂಧೆ” 

ಚಿಕ್ಕೋಡಿ :–

ಪದವಿ ಪೂರ್ವ ಹಂತ ವಿದ್ಯಾರ್ಥಿಗಳಿಗೆ ಪ್ರಮುಖ ಘಟವಾಗಿದ್ದು, ಈ ಹಂತದಲ್ಲಿ ಉತ್ತಮ ರೀತಿಯಲ್ಲಿ ಅಧ್ಯಯನ ಮಾಡಿ ಪಾಲಕರನ್ನು ಹೆಸರು ತರಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ತಿಳಿಸಿದರು.

ತಾಲೂಕಿನ ಮಜಲಟ್ಟಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಕ್ಕೆ ಮಂಗಳವಾರ ಭೇಟಿ ನೀಡಿದ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಮಾತನಾಡಿದರು. 

ಕಾಲೇಜಿನ ಫಲಿತಾಂಶ ಗಮನಿಸಿದರೆ ಮಜಲಟ್ಟಿ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದಾರೆ. ಈ ಫಲಿತಾಂಶ ಹೆಚ್ಚಳಕ್ಕಾಗಿ ಶ್ರಮಿಸಿದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಅಭಿನಂದಿಸುತ್ತೇನೆ ಎಂದರು. 

ಈ ವರ್ಷದಲ್ಲಿ ಮಜಲಟ್ಟಿ ಮತ್ತು ಬೈಲಹೊಂಗಲ ತಾಲೂಕಿನ ವಿದ್ಯಾರ್ಥಿಗಳಿಗೆ ಐಐಟಿ ತರಬೇತಿ ನೀಡಲು ತಯಾರಿ ನಡೆಸಲಾಗಿದೆ. ಪ್ರತಿ ತರಬೇತಿಯಲ್ಲಿ 40 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ವಿದ್ಯಾರ್ಥಿಗಳು ಈ ತರಬೇತಿಗೆ ಆಯ್ಕೆಯಾಗಬೇಕಾದರೆ ಪಾಲಕರ ಒಪ್ಪಿಗೆ ಪತ್ರ ನೀಡಬೇಕು ಎಂದು ತಿಳಿಸಿದರು. 

ವಿದ್ಯಾರ್ಥಿ ಸೌಜನ್ಯ ಕುಂಬಾರ ಮಾತನಾಡಿ, ಸಿಇಟಿ ತರಬೇತಿ ನಮಗೆ ಬಹಳ ಅನುಕೂಲವಾಗಿದೆ. ನಾವು ಪ್ರಶ್ನೆಗಳಿಗೆ ಹೇಗೆ ಉತ್ತರ ನೀಡಬೇಕೆಂದು. ಈ ತರಬೇತಿಯಲ್ಲಿ ತಿಳಿದುಕೊಂಡಿದ್ದೇವೆ. ಆನ್ಲೈನ್ ಕ್ಲಾಸ್‌ ನಲ್ಲಿ ಪಿ.ಪಿ.ಟಿ ಮೂಲಕ ನಮಗೆ ಹೇಳುವುದರಿಂದ ನಮಗೆ ಬಹಳ ಅನುಕೂಲವಾಗಿದೆ ಎಂದು ತಿಳಿಸಿದರು. 

ಬಳಿಕ ಚಿಕ್ಕೋಡಿ ಪಟ್ಟಣದ ತಾಪಂ ಕಚೇರಿಯ ಸಭಾಂಗಣದಲ್ಲಿ ತಾಲೂಕ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಜಿಪಂ ಸಿಇಒ ರಾಹುಲ್ ಶಿಂಧೆ ಅವರು, ಜನರ ಸೇವೆಗಾಗಿ ಕೆಲಸ ಮಾಡಬೇಕು. ಜನರಿಂದ ನಮಗೆ ಯಾವುದೇ ದೂರುಗಳು ಬರದ ಹಾಗೇ ಮತ್ತು ಸಾರ್ವಜನಿಕರಿಂದ ದೂರುಗಳು ಬಂದಲ್ಲಿ ನಿಗದಿತ ಅವಧಿಯೊಳಗೆ ಹಿಂಬರಹ ನೀಡಬೇಕು ಎಂದು ಸೂಚನೆ ನೀಡಿದರು. 

ನಂತರ ಗುತ್ತಿಗೆದಾರರ ಸಮಸ್ಯೆಗಳನ್ನು ಆಲಿಸಿದ ಅವರು, ಬೇಡಕಿಹಾಳ ಮತ್ತು ಶಮನೇವಾಡಿ ಗ್ರಾಮದ ಸರಕಾರಿ ಪ್ರಾಥಮಿಕ ಕನ್ನಡ ಶಾಲೆಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಆಲಿಸಿದರು.

ಇದಾದ ಬಳಿಕ ನಿಪ್ಪಾಣಿ ತಾಲೂಕಿನ ತಾಲೂಕಿನ ಬೇಡಕಿಹಾಳ ಗ್ರಾಮದ ಕನ್ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ಕಾರದಗಾ, ಮಾಂಗೂರ, ಬಾರವಾಡ ಹಾಗೂ ಬೆನಾಡಿ ಗ್ರಾಪಂಗಳ ವ್ಯಾಪ್ತಿಯಲ್ಲಿ ಕೈಗೊಂಡಿದ್ದ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳನ್ನು ಪರಿಶೀಲಿಸಿದರು. 

ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಇ ಪ್ರವೀಣ ಮಠಪತಿ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಇಇ ಪಾಂಡುರಂಗರಾವ್, ಎಇಇ ಬಿ.ಡಿ.ನಾಯಿಕವಾಡಿ, ನಿಪ್ಪಾಣಿ ತಾಪಂ ಇಒ ಪ್ರವೀಣ ಕಟ್ಟಿ, ಸಹಾಯಕ ನಿರ್ದೇಶಕರಾದ ಶಿವಾನಂದ ಶಿರಗಾಂವೆ, ಸುದೀಪ್ ಚೌಗುಲೆ, ಎಸ್.ಎಸ್.ಮಠದ, ತಾಪಂ ವ್ಯವಸ್ಥಾಪಕ ಉದಯಗೌಡ ಪಾಟೀಲ, ಐಇಸಿ ಸಂಯೋಜಕ ರಂಜೀತ ಕಾರ್ಣಿಕ, ಆಡಳಿತ ಸಹಾಯಕ ಅಕ್ಷಯ ಠಕ್ಕಪಗೋಳ ಮತ್ತಿತರರು ಉಪಸ್ಥಿತರಿದ್ದರು.

Share this post:

Leave a Reply

Your email address will not be published. Required fields are marked *

You cannot copy content of this page